Home ಧಾರ್ಮಿಕ ಸುದ್ದಿ ಅಡ್ಕಾರು ಶ್ರೀ ಸುಬ್ರಹ್ಮಣ್ಯ ಸ್ವಾಮಿದೇವಸ್ಥಾನದಲ್ಲಿ ಪ್ರತಿಷ್ಠಾ ದಿನ

ಅಡ್ಕಾರು ಶ್ರೀ ಸುಬ್ರಹ್ಮಣ್ಯ ಸ್ವಾಮಿದೇವಸ್ಥಾನದಲ್ಲಿ ಪ್ರತಿಷ್ಠಾ ದಿನ

1693
0
SHARE

ಜಾಲ್ಸೂರು : ಜಾಲ್ಸೂರು ಗ್ರಾಮದ ಅಡ್ಕಾರು ಶ್ರೀ ಸುಬ್ರಹ್ಮಣ್ಯ ಸ್ವಾಮಿ ದೇವಸ್ಥಾನದಲ್ಲಿ ಪ್ರತಿಷ್ಠಾ ದಿನ ಹಾಗೂ ವರ್ಷಾ ವಧಿ ಜಾತ್ರೆ ಪ್ರಯುಕ್ತ ಬೆಳಗ್ಗೆ ಶ್ರೀ ಸುಬ್ರಹ್ಮಣ್ಯ ದೇವರ ಉತ್ಸವ ಬಲಿ, ದರ್ಶನ ಬಲಿ, ಬಟ್ಟಲು ಕಾಣಿಕೆ, ರಾಜಾಂಗಣ ಪ್ರಸಾದ, ಮಹಾಪೂಜೆ, ಸಂಪ್ರೋಕ್ಷಣೆ, ಮಂತ್ರಾಕ್ಷತೆ ನಡೆದು ಮಧ್ಯಾಹ್ನ ಅನ್ನಸಂತರ್ಪಣೆ ನಡೆಯಿತು.

ಸಂಜೆ ಕೋನಡ್ಕ ಪದವಿನ ಶ್ರೀ ಸ್ಕಂದಶ್ರೀ ಮಹಿಳಾ ಮಂಡಲದ ಸದಸ್ಯರಿಂದ ಸಾಂಸ್ಕೃತಿಕ ಕಾರ್ಯಕ್ರಮ ನಡೆಯಿತು. ರಾತ್ರಿ ವಿಶೇಷ ರಂಗಪೂಜೆ, ಪ್ರಸಾದ
ವಿತರಣೆ, ಅನ್ನಸಂತರ್ಪಣೆ ನಡೆಯಿತು. ಬಳಿಕ ದೀಪಕ್‌ ರೈ ಪಾಣಾಜೆ ಅಭಿನಯದ ತುಳು ಹಾಸ್ಯಮಯ ನಾಟಕ “ನಿತ್ಯೆ ಬನ್ನಗ’ ಪ್ರದರ್ಶನಗೊಂಡಿತ್ತು.

LEAVE A REPLY

Please enter your comment!
Please enter your name here