Home ಧಾರ್ಮಿಕ ಕಾರ್ಯಕ್ರಮ ಅಲಂಕಾರಗುಡ್ಡೆ ಹೊರೆಕಾಣಿಕೆ ಮೆರವಣಿಗೆ ಶೋಭಾಯಾತ್ರೆ

ಅಲಂಕಾರಗುಡ್ಡೆ ಹೊರೆಕಾಣಿಕೆ ಮೆರವಣಿಗೆ ಶೋಭಾಯಾತ್ರೆ

2149
0
SHARE
ಹೊರೆಕಾಣಿಕೆ ಮೆರವಣಿಗೆ ನಡೆಯಿತು.

ತಲಪಾಡಿ: ಇಲ್ಲಿನ ಅಲಂಕಾರಗುಡ್ಡೆ ಶ್ರೀ ಮಲರಾಯ, ಧೂಮಾವತಿ, ಬಂಟ ದೈವಸ್ಥಾನದ ಶ್ರೀ ನಾಗದೇವರು ಮತ್ತು ಶ್ರೀ ಮಲರಾಯ, ಧೂಮಾವತಿ, ಬಂಟ ದೈವಗಳ ಪುನಃ ಪ್ರತಿಷ್ಠೆ, ಬ್ರಹ್ಮಕಲಶೋತ್ಸವ ಫೆ. 21ರಿಂದ ಆರಂಭಗೊಂಡಿದ್ದು ಫೆ. 25ರ ತನಕ ನಡೆಯಲಿದೆ. ಆ ಪ್ರಯುಕ್ತ ಶುಕ್ರವಾರ ಹೊರಟ ಹೊರೆಕಾಣಿಕೆ ಮೆರವಣಿಗೆ ಶೋಭಾ ಯಾತ್ರೆಗೆ ನ್ಯಾಯವಾದಿ ಗಂಗಾಧರ್‌ ಉಳ್ಳಾಲ್‌ ಚಾಲನೆ ನೀಡಿದರು.

ಕೋಟೆಕಾರು ಬೀರಿ ಶ್ರೀ ಗಣೇಶ ಮಂದಿರದ ಬಳಿಯಿಂದ ಆರಂಭಗೊಂಡ ಹಸಿರುಹೊರೆ ಕಾಣಿಕೆ ಮೆರವಣಿಗೆ ಬೀರಿ-ಕೆ.ಸಿ. ರೋಡ್‌-ಪಿಲಿಕೂರು ಮಾರ್ಗವಾಗಿ ಶ್ರೀ ಕ್ಷೇತ್ರಕ್ಕೆ ತಲುಪಿತು. ಬಹ್ಮಶ್ರೀ ವರ್ಕಾಡಿ ದಿನೇಶ ಕೃಷ್ಣ ತಂತ್ರಿಗಳ ನೇತೃತ್ವದಲ್ಲಿ ವೇ|ಮೂ| ತಲಪಾಡಿ ಪಂಜಾಳ ಶ್ರೀ ಬಾಲಕೃಷ್ಣ ಭಟ್‌ ಅವರ ಉಪಸ್ಥಿತಿಯಲ್ಲಿ ನಡೆಯಲಿದೆ.

ಕ್ಷೇತ್ರದ ವ್ಯವಸ್ಥಾಪನ ಸಮಿತಿ ಅಧ್ಯಕ್ಷ ಕಿಳ್ಳನ ಮನೆ ಯಾನೆ ತಲಪಾಡಿ ದೊಡ್ಡಮನೆ ರವೀಂದ್ರನಾಥ ಶೆಟ್ಟಿ, ವ್ಯವಸ್ಥಾಪನ ಸಮಿತಿ ಸದಸ್ಯ ಸಚ್ಚಿದಾನಂದ ಶೆಟ್ಟಿ ಹೊಸಮನೆ, ಜೀರ್ಣೋದ್ಧಾರ ಸಮಿತಿಯ ಗೌರವಾಧ್ಯಕ್ಷ ಸುಬ್ಬಯ ಮಾರ್ಲ ಉಳಿಪಾಡಿಗುತ್ತು, ಪ್ರಧಾನ ಕಾರ್ಯದರ್ಶಿ ಬಿ. ಮೋಹನ್‌ ದಾಸ ಗಾಂಭೀರ, ಅಧ್ಯಕ್ಷ ಡಾ| ಜಯಪಾಲ ಶೆಟ್ಟಿ ದೊಡ್ಡಮನೆ, ಬ್ರಹ್ಮಕಲಶ ಸಮಿತಿಯ ಗೌರವಾಧ್ಯಕ್ಷ ಕೆ.ಸಿ. ಆಳ್ವ ನೆತ್ತಿಲಬಾಳಿಕೆ, ಉಪಾಧ್ಯಕ್ಷ ರಾಮಯ್ಯ ಕಿಲ್ಲೆ ಮೇಗಿನ ಪಂಜಾಲಗುತ್ತು, ಮಲರಾಯ ದೈವಸ್ಥಾನದ ಪಾತ್ರಿ ಅಂತ ಪೂಜಾರಿ, ಸೀತಾರಾಮ ಶೆಟ್ಟಿ ನೆತ್ತಿಲ ಬಾಳಿಕೆ, ಹೊರೆಕಾಣಿಕೆ ನಿರ್ವಹಣ ಸಮಿತಿಯ ಪ್ರಧಾನ ಸಂಚಾಲಕ ಜಿತೇಂದ್ರ ಶೆಟ್ಟಿ ತಲಪಾಡಿಗುತ್ತು, ಪ್ರಧಾನ ಕಾರ್ಯದರ್ಶಿ ಗೋಪಾಲಕೃಷ್ಣ ಮೇಲಂಟ ಬೊಳ್ಯಗುತ್ತು, ಪ್ರಶಾಂತ್‌ ಚೌಟ, ಗಣೇಶ್‌ ಶೆಟ್ಟಿ ಸೇರಿದಂತೆ ಗಣ್ಯರು, ಭಕ್ತರು ಪಾಲ್ಗೊಂಡಿದ್ದರು.

LEAVE A REPLY

Please enter your comment!
Please enter your name here