ತಾಳಿಕೋಟೆ: ತಾಲೂಕಿನ ಬೊಮ್ಮನಹಳ್ಳಿ ಗ್ರಾಮದ ಆರಾಧ್ಯ ದೈವ ಅಂಬಲೇಶ್ವರ ಜಾತ್ರೋತ್ಸವ ಅಂಗವಾಗಿ ಮಹಾರಥೋತ್ಸವ ವಿಜೃಂಭಣೆಯಿಂದ ಜರುಗಿತು.
ಜಾತ್ರೋತ್ಸವ ಅಂಗವಾಗಿ ಬೆಳಗಿನ ಜಾವ ಅಂಬಲೇಶ್ವರ ಶ್ರೀಗಳ ಮಹಾಗದ್ದುಗೆಗೆ ಮಹಾಭಿಷೇಕ, ಬಿಲ್ವಾರ್ಚನೆ, ಪುಷ್ಪಾರ್ಚನೆ, ಮಹಾ ಮಂಗಳಾರತಿ ಕಾರ್ಯಕ್ರಮಗಳು ಜರುಗಿದ್ದವಲ್ಲದೇ ನಂತರ ಮಧ್ಯಾಹ್ನ ಪಲ್ಲಕಿ ಉತ್ಸವ ಗ್ರಾಮದ ಪ್ರಮುಖ ಬೀದಿಗಳಲ್ಲಿ ಜರುಗಿ ಭಕ್ತಾದಿಗಳಿಗೆ ಮಹಾ ಪ್ರಸಾದ ವಿತರಿಸಲಾಯಿತು.
ಸಾಯಂಕಾಲ ಮಹಾ ರಥೋತ್ಸವ ದೇವಸ್ಥಾನದಿಂದ ಪ್ರಾರಂಭಗೊಂಡು ಪಾದಗಟ್ಟೆವರೆಗೆ ಜರುಗಿ ಮರಳಿ ಅದೇ ಮಾರ್ಗವಾಗಿ ದೇವಸ್ಥಾನ ತಲುಪಿತು .