ಕಲ್ಲಾರೆ: ಇಲ್ಲಿನ ಶ್ರೀ ರಾಘವೇಂದ್ರ ಸ್ವಾಮಿ ಮಠದಲ್ಲಿ ರಾಘವೇಂದ್ರ ಸ್ವಾಮಿಗಳ 347ನೇ ಆರಾಧನಾ ಮಹೋತ್ಸವದ ಅಂಗವಾಗಿ ಎರಡನೇ ದಿನ ಮಂಗಳವಾರ ವಿಶೇಷ ಆರಾಧನೆಗಳು ನಡೆದವು. ಅರ್ಚಕ ರಾಘವೇಂದ್ರ ಉಡುಪ ನೇತೃತ್ವದಲ್ಲಿ ಬೆಳಗ್ಗೆ ನಿರ್ಮಾಲ್ಯ ವಿಸರ್ಜನ ಪೂಜೆ, ಫಲ ಪಂಚಾಮೃತಾಭಿಷೇಕ, ಮಧ್ಯಾಹ್ನ ಶ್ರೀ ಗುರುಗಳ ಆರಾಧನೆ, ಮಧ್ಯಾಹ್ನ ಮಹಾಪೂಜೆ, ಅನ್ನಸಂತರ್ಪಣೆ, ಸಂಜೆ ಭಜನೆ, ರಾತ್ರಿ ಮಹಾಪೂಜೆ, ಪಲ್ಲಕಿ ಉತ್ಸವ, ರಥೋತ್ಸವ, ಪ್ರಸಾದ ವಿತರಣೆ ನಡೆಯಿತು.
ಮಧ್ಯಾಹ್ನ ಅನ್ನ ಸಂತರ್ಪಣೆಯಲ್ಲಿ ನೂರಾರು ಭಕ್ತರು ಪಾಲ್ಗೊಂಡರು. ಆ. 29ರಂದು ಪೂರ್ವಾಹ್ನ ನಿರ್ಮಾಲ್ಯ ವಿಸರ್ಜನ ಪೂಜೆ, ಮಧ್ಯಾಹ್ನ ಮಹಾಪೂಜೆ, ಅನ್ನಸಂತರ್ಪಣೆ, ಸಂಜೆ ಭಜನೆ, ರಾತ್ರಿ ಮಹಾಪೂಜೆ, ಪಲ್ಲಕಿ ಉತ್ಸವ, ರಥೋತ್ಸವ, ಪ್ರಸಾದ ವಿತರಣೆ ನಡೆಯಲಿದೆ.