Home ಧಾರ್ಮಿಕ ಸುದ್ದಿ ಬಾರ್ಕೂರು ವೇಣುಗೋಪಾಲಕೃಷ್ಣ ದೇವಸ್ಥಾನ ನಾಗಮಂಡಲೋತ್ಸವಕ್ಕೆ ಚಪ್ಪರ ಮುಹೂರ್ತ

ಬಾರ್ಕೂರು ವೇಣುಗೋಪಾಲಕೃಷ್ಣ ದೇವಸ್ಥಾನ ನಾಗಮಂಡಲೋತ್ಸವಕ್ಕೆ ಚಪ್ಪರ ಮುಹೂರ್ತ

1401
0
SHARE

ಬ್ರಹ್ಮಾವರ: ಸೋಮಕ್ಷತ್ರಿಯ ಗಾಣಿಗ ಸಮಾಜದ ಕುಲದೇವರಾದ ಬಾರ್ಕೂರು ಶ್ರೀ ವೇಣುಗೋಪಾಲಕೃಷ್ಣ ಹಾಗೂ ಪರಿವಾರ ದೇವರ ಸನ್ನಿಧಿಯಲ್ಲಿ ಸಮಾಜದ ಅಭ್ಯುದಯಕ್ಕಾಗಿ ನಡೆಯುವ ಅಷ್ಟಬಂಧ ಸಹಿತ ಬ್ರಹ್ಮಕಲಶ ಹಾಗೂ ಅಷ್ಟಪವಿತ್ರ ನಾಗಮಂಡಲೋತ್ಸವ ಕಾರ್ಯಕ್ರಮದ ಪೂರ್ವಭಾವಿ ಚಪ್ಪರ ಮುಹೂರ್ತ ಜರಗಿತು.

ಜಿಲ್ಲಾ ಸೋಮಕ್ಷತ್ರಿಯ ಗಾಣಿಗ ಸಮಾಜದ ಆಧ್ಯಕ್ಷ ಕೆ. ಗೋಪಾಲ ಅಧ್ಯಕ್ಷತೆ ವಹಿಸಿದ್ದರು. ಅಷ್ಟಬಂಧ ಬ್ರಹ್ಮಕಲಶ ಹಾಗೂ ನಾಗಮಂಡಲೋತ್ಸವ ಸಮಿತಿಯ ಗೌರವಾಧ್ಯಕ್ಷ ಬಿ.ಎಸ್‌. ಮಂಜುನಾಥ ಚಪ್ಪರ ಮುಹೂರ್ತ ನೆರವೇರಿಸಿದರು. ವೇ|ಮೂ| ಶ್ರೀಕಾಂತ್‌ ಸಾಮಗ ಧಾರ್ಮಿಕ ಕಾರ್ಯಕ್ರಮದ ನೇತೃತ್ವ ವಹಿಸಿದ್ದರು.

ಸಮಿತಿಯ ಕಾರ್ಯಾಧ್ಯಕ್ಷ ಗೋಪಾಲ ಜಿ. ಚೆಲ್ಲೆಮಕ್ಕಿ, ಕಾರ್ಯದರ್ಶಿ ಸೂರ್ಯನಾರಾಯಣ ಗಾಣಿಗ, ಜಿಲ್ಲಾ ಸಂಘದ ಕಾರ್ಯದರ್ಶಿ ನಾಗರಾಜ ಸಾಲಿಗ್ರಾಮ, ಖಜಾಂಚಿ ವಾಸುದೇವ ಬೈಕಾಡಿ, ದಾನಿಗಳಾದ ಬಾಲಚಂದ್ರ ಕಟಪಾಡಿ, ಲಕ್ಷ್ಮೀನಾರಾಯಣ ಕಟಪಾಡಿ ಹಾಗೂ ವಿವಿಧ ಉಪಸಮಿತಿಗಳ ಪದಾಧಿಕಾರಿಗಳು, ಮಹಿಳಾ ಸಂಘಟನೆ, ಯುವಕ ಸಂಘಟನೆಗಳ ಪದಾಧಿಕಾರಿಗಳು, ಸದಸ್ಯರು, ಸಮಾಜ ಬಾಂಧವರು ಉಪಸ್ಥಿತರಿದ್ದರು.

ನಾಗಮಂಡಲದ ದಿನಾಂಕ ಬದಲು ಈ ಹಿಂದೆ ಎ.14ರಿಂದ 19ರ ವರೆಗೆ ನಾಗಮಂಡಲ, ಬ್ರಹ್ಮಕಲಶ ಕಾರ್ಯಕ್ರಮ ನಿಗದಿಯಾಗಿತ್ತು. ಆದರೆ ಇದೀಗ ಆ ದಿನಾಂಕದಂದು
ಚುನಾವಣೆ ನಡೆಯಲಿರುವುದರಿಂದ ಕಾರ್ಯಕ್ರಮವನ್ನು ಮುಂದೂಡಲಾಗಿದ್ದು, ಎ.26ರಿಂದ ಮೇ 2ರ ವರೆಗೆ ಕಾರ್ಯಕ್ರಮಗಳು ನಡೆಯಲಿವೆ ಹಾಗೂ ಮೇ 1ರಂದು ಬ್ರಹ್ಮಕಲಶಾಭಿಷೇಕ, ನಾಗಮಂಡಲೋತ್ಸವ ಹಾಗೂ ಅನ್ನಸಂತರ್ಪಣೆ ಪ್ರಮುಖ ಕಾರ್ಯಕ್ರಮ ಜರಗಲಿದೆ ಎಂದು ಕಾರ್ಯಕ್ರಮದ ಸಂಘಟಕರು ತಿಳಿಸಿದ್ದಾರೆ.

LEAVE A REPLY

Please enter your comment!
Please enter your name here