ಬೇಕಲ : ಮುದಿಯಕ್ಕಾಲು ಶ್ರೀ ಕಾಲಭೈರವ ಮತ್ತು ಶ್ರೀ ಮಹಾ ಗಣಪತಿ ದೇವಸ್ಥಾನದ ಪುನಃಪ್ರತಿಷ್ಠಾ ಅಷ್ಟ ಬಂಧ ಬ್ರಹ್ಮಕಲಶೋತ್ಸವ ವಿವಿಧ ಕಾರ್ಯಕ್ರಮ ಗಳೊಂದಿಗೆ ಸಂಪನ್ನಗೊಂಡಿತು.
ಕಾರ್ಯಕ್ರಮದ ಅಂಗವಾಗಿ ಡಿ. 10 ರಂದು ಕಣ್ಣಂಗೊಳ ಶ್ರೀ ದುರ್ಗಾಂಬಿಕಾ ದೇವಸ್ಥಾನದಿಂದ ವಾದ್ಯಘೋಷಗಳೊಂದಿಗೆ ಹಸಿರುವಾಣಿ ಹೊರೆಕಾಣಿಕೆ ಮೆರವಣಿಗೆ ನಡೆಯಿತು. ಆ ಬಳಿಕ ಉಗ್ರಾಣ ತುಂಬಲಾಯಿತು. ಬ್ರಹ್ಮಶ್ರೀ ಉಚ್ಚಿಲ ಪದ್ಮನಾಭ ತಂತ್ರಿವರ್ಯರಿಗೆ ಪೂರ್ಣಕುಂಭ ಸ್ವಾಗತ, ಸಾಮೂಹಿಕ ಪ್ರಾರ್ಥನೆ, ಪುಣ್ಯಾಹ, ಪ್ರಾಸಾದ ಶುದ್ಧಿ, ವಾಸ್ತು – ರಾಕ್ಷೋಘ್ನ ಹೋಮ, ವಾಸ್ತು ಬಲಿಯ ಬಳಿಕ ಸ್ಥಳೀಯ ಮಕ್ಕಳಿಂದ ನೃತ್ಯ ಕಲರವ ಜರಗಿತು. ರಾತ್ರಿ ಅನ್ನಸಂತರ್ಪಣೆ ನಡೆಯಿತು.
ಡಿ. 11ರಂದು ಬೆಳಗ್ಗೆ ಗಣಪತಿ ಹೋಮ, ಬಿಂಬ ಶುದ್ಧಿ, ಪ್ರೋಕ್ತ ಹೋಮ, ಪ್ರಾಯಶ್ಚಿತ್ತ ಹೋಮ, ಶಾಂತಿ ಹೋಮ, ಅನುಜ್ಞಾ ಕಲಶ ಪೂಜೆ, ಜೀವ ಕಲಶ ಪೂಜೆ, ಜೀವ ಕಲಶ, ಶಯನ, ಭಜನೆ, ಮಧ್ಯಾಹ್ನ ಅನ್ನಸಂತರ್ಪಣೆ, ಸಂಜೆ ಅಧಿವಾಸ ಹೋಮ, ಕುಂಭೇಶಿ ಕರ್ಕರಿ, ಕಲಶ ಪೂಜೆ, ಬ್ರಹ್ಮಕಲಶ ಪೂಜೆ, ಪರಿಕಲಶ ಪೂಜೆ, ಕಲಶಾಧಿವಾಸ, ಸಭಾ ಕಾರ್ಯಕ್ರಮ, ರಾತ್ರಿ ನೃತ್ಯಾವಳಿ, ಅನ್ನಸಂತರ್ಪಣೆ ಜರಗಿತು.
ಡಿ.12 ರಂದು ಬೆಳಗ್ಗೆ ಗಣಪತಿ ಹೋಮ, ತತ್ತ್ವ ಹೋಮ, ಸಾನ್ನಿಧ್ಯ ಪ್ರತಿಷ್ಠೆ, ಜೀವಕಲಶಾಭಿಷೇಕ, ತತ್ತ್ವ ಕಲಶಾಭಿಷೇಕ, ಪರಿಕಲಶಾಭಿಷೇಕ, ನಾಗ ಸನ್ನಿಧಿಯಲ್ಲಿ ತಂಬಿಲ, ಬ್ರಹ್ಮಕಲಶಾಭಿಷೇಕ, ಮಧ್ಯಾಹ್ನ ಮಹಾಪೂಜೆ, ಪ್ರತಿಷ್ಠಾ ಬಲಿ, ಮಂತ್ರಾಕ್ಷತೆ ನಡೆಯಿತು.