Home ಧಾರ್ಮಿಕ ಸುದ್ದಿ ಸಾಲಿಗ್ರಾಮ ಗುರುನರಸಿಂಹ ದೇವಸ್ಥಾನ, ಬ್ರಹ್ಮಕಲಶೋತ್ಸವಕ್ಕೆ ಚಪ್ಪರ ಮುಹೂರ್ತ

ಸಾಲಿಗ್ರಾಮ ಗುರುನರಸಿಂಹ ದೇವಸ್ಥಾನ, ಬ್ರಹ್ಮಕಲಶೋತ್ಸವಕ್ಕೆ ಚಪ್ಪರ ಮುಹೂರ್ತ

310
0
SHARE
ಅನಂತಪದ್ಮನಾಭ ಐತಾಳ ಧಾರ್ಮಿಕ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು.

ಕೋಟ: ಸಾಲಿಗ್ರಾಮ ಗುರುನರಸಿಂಹ ದೇವಸ್ಥಾನದಲ್ಲಿ ಮೇ 2ರಿಂದ 8ರ ವರೆಗೆ ನಡೆಯಲಿರುವ ಬ್ರಹ್ಮಕಲಶೋತ್ಸವ ಪ್ರಯುಕ್ತ ಚಪ್ಪರ ಮುಹೂರ್ತ ಎ. 10ರಂದು ಜರಗಿತು. ದೇಗುಲದ ಆಡಳಿತ ಮಂಡಳಿ ಅಧ್ಯಕ್ಷ ಅನಂತಪದ್ಮನಾಭ ಐತಾಳ ಅವರು ವಿವಿಧ ಧಾರ್ಮಿಕ ಕಾರ್ಯಕ್ರಮಗಳಿಗೆ ಚಾಲನೆ ನೀಡಿದರು.

ಆ ಪ್ರಯುಕ್ತ ನಡೆಯಲಿರುವ ಬ್ರಹ್ಮಕಲಶೋತ್ಸವ, ಧ್ವಜ ಪ್ರತಿಷ್ಠಾಪನೆ, ದುರ್ಗಾಪರಮೇಶ್ವರೀ ಬಿಂಬ ಪ್ರತಿಷ್ಠೆ, ಬ್ರಹ್ಮರಥೋತ್ಸವ ಕಾರ್ಯಕ್ರಮ ಸುಗಮವಾಗಿ ಸಾಗಲಿ ಎಂದು ಪುರೋಹಿತ ವೇ| ಮೂ| ಚಂದ್ರಶೇಖರ ಅಡಿಗ ಪ್ರಾರ್ಥನೆ ಸಲ್ಲಿಸಿದರು.

ಕೂಟ ಮಹಾಜಗತ್ತು ಕೇಂದ್ರ ಸಂಸ್ಥೆಯ ಕಾರ್ಯದರ್ಶಿ ರಾಮಕೃಷ್ಣ ಐತಾಳ, ಸಾಲಿಗ್ರಾಮ ಘಟಕದ ಅಧ್ಯಕ್ಷ ಕೆ. ತಾರಾನಾಥ ಹೊಳ್ಳ, ಚಂದ್ರಶೇಖರ್‌ ಉಪಾಧ್ಯ, ಚಂದ್ರಶೇಖರ ಹೊಳ್ಳ, ಸದಾರಮ ಹೇರ್ಲೆ, ಶಿವರಾಮ ಉಡುಪ ಮತ್ತಿತರರಿದ್ದರು.

LEAVE A REPLY

Please enter your comment!
Please enter your name here