Home ಧಾರ್ಮಿಕ ಸುದ್ದಿ ಧರ್ಮಸ್ಥಳ: ಹಬ್ಬದ ವಾತಾವರಣ

ಧರ್ಮಸ್ಥಳ: ಹಬ್ಬದ ವಾತಾವರಣ

1693
0
SHARE

ಬೆಳ್ತಂಗಡಿ : ಧರ್ಮಸ್ಥಳದ ಧರ್ಮಾಧಿಕಾರಿ ಡಾ| ಡಿ. ವೀರೇಂದ್ರ ಹೆಗ್ಗಡೆಯವರ ಪಟ್ಟಾಭಿಷೇಕದ 51ನೇ ವರ್ಧಂತಿ ಪ್ರಯುಕ್ತ ಧರ್ಮಸ್ಥಳದಲ್ಲಿ ಬುಧವಾರ ಹಬ್ಬದ ವಾತಾವರಣ. ಎಲ್ಲೆಲ್ಲೂ ಸಂಭ್ರಮ. ಶ್ರೀ ಮಂಜುನಾಥ ಸ್ವಾಮಿ ದೇವಸ್ಥಾನ, ಭಗವಾನ್‌ ಶ್ರೀ ಚಂದ್ರನಾಥ ಸ್ವಾಮಿ ಬಸದಿ, ನೆಲ್ಯಾಡಿ ಬೀಡು, ಹೆಗ್ಗಡೆಯವರ ಬೀಡು ಹಾಗೂ ಎಲ್ಲ ಕಟ್ಟಡಗಳನ್ನು ಅಲಂಕರಿಸಲಾಗಿತ್ತು. ದೇವಸ್ಥಾನದಲ್ಲಿ ಹಾಗೂ ಬಸದಿಯಲ್ಲಿ ವಿಶೇಷ ಪೂಜೆ ನಡೆಯಿತು.

ಮೂಡಬಿದಿರೆಯ ಶ್ರೀ ಚಾರುಕೀರ್ತಿ ಭಟ್ಟಾರಕ ಸ್ವಾಮೀಜಿ, ಮಾಣಿಲದ ಶ್ರೀ ಮೋಹನದಾಸ ಸ್ವಾಮೀಜಿ, ಮಾಜಿ ಸಚಿವ ಕೃಷ್ಣ ಜೆ. ಪಾಲೆಮಾರ್‌, ಮೂಡಬಿದಿರೆ ಆಳ್ವಾಸ್‌ ಶಿಕ್ಷಣ ಪ್ರತಿಷ್ಠಾನದ ಅಧ್ಯಕ್ಷ ಡಾ| ಎಂ. ಮೋಹನ್‌ ಆಳ್ವ, ಮಾಜಿ ಶಾಸಕ ಕೆ. ಪ್ರಭಾಕರ ಬಂಗೇರ, ಏರ್ಯ ಲಕ್ಷ್ಮೀನಾರಾಯಣ ಆಳ್ವ, ಮಂಗಳೂರಿನ ಶೋಭಾಕರ ಬಲ್ಲಾಳ್‌, ದಕ್ಷಿಣ ಕನ್ನಡ ಜಿಲ್ಲಾ ಕಸಾಪ ಅಧ್ಯಕ್ಷ ಕೆ. ಪ್ರದೀಪ್‌ ಕುಮಾರ್‌ ಕಲ್ಕೂರ, ಡಾ| ಕೆ. ಚಿನ್ನಪ್ಪ ಗೌಡ, ಮಂಗಳೂರಿನ ಉದ್ಯಮಿ ಪುಷ್ಪರಾಜ್‌ ಜೈನ್‌, ಉಜಿರೆ ಶ್ರೀ ಜನಾರ್ದನ ದೇವಸ್ಥಾನದ ಆಡಳಿತ ಮೊಕ್ತೇಸರ ವಿಜಯರಾಘವ ಪಡ್ವೆಟ್ನಾಯ, ಕೆ. ಪ್ರತಾಪಸಿಂಹ ನಾಯಕ್‌ ಮೊದಲಾದವರು ಹೆಗ್ಗಡೆ ಅವರಿಗೆ ಗೌರವ ಸಲ್ಲಿಸಿದರು.

ಹೆಗ್ಗಡೆಯವರಿಗೆ ಗೌರವ
ಊರಿನ-ಪರವೂರಿನ ಭಕ್ತರು, ಅಭಿಮಾನಿಗಳು, ಸಂಘ- ಸಂಸ್ಥೆಗಳ ನೌಕರರು ಹೆಗ್ಗಡೆಯವರಿಗೆ ಭಕ್ತಿ ಪೂರ್ವಕ ಗೌರವ ಸಲ್ಲಿಸಿದರು.

LEAVE A REPLY

Please enter your comment!
Please enter your name here