ಬೆಳ್ತಂಗಡಿ : ಶ್ರೀ ಕ್ಷೇತ್ರ ಧರ್ಮಸ್ಥಳದ ಮಂಜುನಾಥಸ್ವಾಮಿ ಸನ್ನಿಧಿಯಲ್ಲಿ ವಾರ್ಷಿಕ ವಿಷು ಜಾತ್ರಾ ಮಹೋತ್ಸವ ಧಮಾಧಿಕಾರಿ ಡಾ| ಡಿ. ವೀರೇಂದ್ರ ಹೆಗ್ಗಡೆಯವರ ನೇತೃತ್ವದಲ್ಲಿ ಅರಂಭವಾಗಿದೆ.
ಶನಿವಾರ ಹಾಗೂ ಭಾನುವಾರ ರಜಾ ದಿನವಾದ್ದರಿಂದ ದೇವಾಲಯದಲ್ಲಿ ಹೆಚ್ಚಿನ ಜನಸಂಖ್ಯೆ ಕಂಡುಬಂತು. ದೇವಾಲಯದಲ್ಲಿ ವಿಶೇಷ ಪೂಜೆಗಳು ನಡೆದವು. ಧ್ವಜಾರೋಹಣ ನಡೆದಿದ್ದು, ಎ.16ರಂದು ಹೊಸಕಟ್ಟೆ ಉತ್ಸವ, 17ರಂದು ಕಂಚಿ ಮಾರುಕಟ್ಟೆ ಉತ್ಸವ, 18ರಂದು ಉದ್ಯಾನೋತ್ಸವ, 19ರಂದು ಕೆರೆಕಟ್ಟೆ ಉತ್ಸವ, 20ರಂದು ಗೌರಿ ಮಾರುಕಟ್ಟೆ ಉತ್ಸವ, ಚಂದ್ರಮಂಡಲೋತ್ಸವ, 21ರಂದು ಮಹಾರಥೋತ್ಸವ, 22ರಂದು ಅವಭೃತ ಸ್ನಾನ, ಧ್ವಜಾವರೋಹಣದೊಂದಿಗೆ ವಾರ್ಷಿಕ ವಿಷು ಜಾತ್ರಾ ಮಹೋತ್ಸವ ಸಂಪನ್ನಗೊಳ್ಳಲಿದೆ.
ತಾಲೂಕಿನ ಜನಾರ್ಧನ ದೇವಸ್ಥಾನ, ಸುರ್ಯ ಸದಾಶಿವ ರುದ್ರ ದೇವಸ್ಥಾನಗಳಲ್ಲಿ ವಿಶೇಷ ಪೂಜೆ ಹಮ್ಮಿಕೊಳ್ಳಲಾಗಿತ್ತು.