ಸುಳ್ಯ: ಜಾಲ್ಸೂರು ಗ್ರಾಮದ ಅಡ್ಕಾರು ಶ್ರೀ ಸುಬ್ರಹ್ಮಣ್ಯ ಸ್ವಾಮಿ ದೇವಸ್ಥಾನದಲ್ಲಿ ಪ್ರತಿಷ್ಠಾ ದಿನ ಹಾಗೂ ವರ್ಷಾವಧಿ ಜಾತ್ರೆ ಫೆ. 18ರಿಂದ 20ರ ತನಕ ಬ್ರಹ್ಮಶ್ರೀ ಕುಂಟಾರು ವಾಸುದೇವ ತಂತ್ರಿ ಅವರ ಮಾರ್ಗದರ್ಶನದಲ್ಲಿ ಬ್ರಹ್ಮಶ್ರೀ ಕುಂಟಾರು ರವೀಶ ತಂತ್ರಿ ಅವರ ನೇತೃತ್ವದಲ್ಲಿ ವಿವಿಧ ವೈದಿಕ, ಧಾರ್ಮಿಕ, ಸಾಂಸ್ಕೃತಿಕ, ಸಭಾ ಕಾರ್ಯಕ್ರಮಗಳು ನಡೆಯಲಿವೆ.
ಫೆ. 18ರಂದು ಹಸಿರುವಾಣಿ ಮೆರವಣಿಗೆ, ಉಗ್ರಾಣ ತುಂಬಿಸುವುದು, ಮಹಾ ಪೂಜೆ, ಪ್ರಸಾದ ವಿತರಣೆ, ಅನ್ನಸಂತರ್ಪಣೆ ನಡೆಯಲಿದೆ. ಸಂಜೆ ಸಭಾ ಕಾರ್ಯಕ್ರಮದಲ್ಲಿ ಶಾಸಕ ಎಸ್.ಅಂಗಾರ ಅಧ್ಯಕ್ಷತೆ ವಹಿಸಲಿದ್ದಾರೆ. ಬಳಿಕ ಗಾನ ಮತ್ತು ನೃತ್ಯ ವೈಭವ ನಡೆಯಲಿದೆ.
ಫೆ. 19ರಂದು ಸುಬ್ರಹ್ಮಣ್ಯ ಹವನ, ಗಣಪತಿ ಹವನ, ವಿವಿಧ ವೈದಿಕ ಕಾರ್ಯಕ್ರಮ, ಮಹಾಪೂಜೆ ಬಳಿಕ ಅನ್ನಸಂತರ್ಪಣೆ, ಸಂಜೆ ದೀಪಾರಾಧನೆ, ರಾತ್ರಿ ಮಹಾಪೂಜೆ, ಶ್ರೀ ದೇವರ ಉತ್ಸವ ಬಲಿ, ನೃತ್ಯ ಬಲಿ, ವಸಂತ ಕಟ್ಟೆ ಪೂಜೆ, ಬೆಡಿ ಸೇವೆ, ಪಟ್ಟಣ ಸವಾರಿ, ಅನ್ನಸಂತರ್ಪಣೆ ನಡೆಯಲಿದೆ.
ಫೆ. 20ರಂದು ಬೆಳಗ್ಗೆ ಶ್ರೀ ದೇವರ ಉತ್ಸವ ಬಲಿ, ದರ್ಶನ ಬಲಿ, ಬಟ್ಟಲು ಕಾಣಿಕೆ, ರಾಜಾಂಗಣ ಪ್ರಸಾದ, ಮಹಾಪೂಜೆ, ಸಂಪ್ರೋಕ್ಷಣೆ, ಮಂತ್ರಾಕ್ಷತೆ, ಅನ್ನಸಂತರ್ಪಣೆ, ಸಂಜೆ ರಂಗಪೂಜೆ, ಪ್ರಸಾದ ವಿತರಣೆ, ಅನ್ನಸಂತರ್ಪಣೆ, ರಾತ್ರಿ ಯಕ್ಷಗಾನ ಬಯಲಾಟ ‘ವೀರೋಚನ ಕಾಳಗ’ ನಡೆಯಲಿದೆ.