Home ಧಾರ್ಮಿಕ ಸುದ್ದಿ ಫೆ. 13: ಮಣಿಕ್ಕಾರ ಪಾಲ್ತಾಡು ದೇಗುಲದ ದೃಢಕಲಶ

ಫೆ. 13: ಮಣಿಕ್ಕಾರ ಪಾಲ್ತಾಡು ದೇಗುಲದ ದೃಢಕಲಶ

1671
0
SHARE

ಸವಣೂರು: ಕೊಳ್ತಿಗೆ ಗ್ರಾಮದ ಮಣಿಕ್ಕಾರ ಪಾಲ್ತಾಡು ಶ್ರೀ ವಿಷ್ಣುಮೂರ್ತಿ ದೇವಸ್ಥಾನದ ನವೀಕರಣ ಪುನರ್‌ ಪ್ರತಿಷ್ಠಾಷ್ಟಬಂಧ ಬ್ರಹ್ಮಕಲಶೋತ್ಸವ ಡಿ. 23ರಿಂದ ಡಿ.28 ರವರೆಗೆ ನಡೆದಿದ್ದು, ದೃಢಕಲಶಾಭಿಷೇಕವು ಕ್ಷೇತ್ರದ ತಂತ್ರಿ ಬ್ರಹ್ಮಶ್ರೀ ಕೆಮ್ಮಿಂಜೆ ನಾಗೇಶ ತಂತ್ರಿಗಳ ನೇತೃತ್ವದಲ್ಲಿ ವಿವಿಧ ವೈದಿಕ ಧಾರ್ಮಿಕ ಕಾರ್ಯಕ್ರಮಗಳೊಂದಿಗೆ ಫೆ. 13ರಂದು ನಡೆಯಲಿದೆ.

ಬೆಳಗ್ಗೆ 6ರಿಂದ ಗಣಪತಿ ಹವನ, 10ರಿಂದ ಕಲಶಾಭಿಷೇಕ, 11 ಗಂಟೆಗೆ ಉಡುಪಿ ಪುತ್ತಿಗೆ ಮಠದ ಶ್ರೀ ಸುಗುಣೇಂದ್ರತೀರ್ಥ ಶ್ರೀಪಾದರು ಆಶೀರ್ವಚನ ನೀಡುವರು.

ಬಳಿಕ ಶ್ರೀ ದೇವರಿಗೆ ಮಹಾಪೂಜೆ,ಪ್ರಸಾದ ವಿತರಣೆ ಸಾಮೂಹಿಕ ಅನ್ನಸಂತರ್ಪಣೆ ನಡೆಯಲಿದೆ ಎಂದು ದೇವಸ್ಥಾನದ ಪ್ರಕಟನೆ ತಿಳಿಸಿದೆ.

LEAVE A REPLY

Please enter your comment!
Please enter your name here