ಸುಳ್ಯ : ಆಲೆಟ್ಟಿ ಶ್ರೀ ಸದಾಶಿವ ದೇವಸ್ಥಾನದ ಕಾಲಾವಧಿ ಜಾತ್ರೆ ಬ್ರಹ್ಮಶ್ರೀ ಕುಂಟಾರು ವಾಸುದೇವ ತಂತ್ರಿಗಳ ಮಾರ್ಗದರ್ಶನ ಹಾಗೂ ಬ್ರಹ್ಮಶ್ರೀ ಕುಂಟಾರು ರವೀಶ ತಂತ್ರಿಗಳ ನೇತೃತ್ವದಲ್ಲಿ ವಿವಿಧ ಧಾರ್ಮಿಕ ಕಾರ್ಯಕ್ರಮಗಳೊಂದಿಗೆ ನಡೆಯಿತು.
ಜಾತ್ರೆ ಪ್ರಯುಕ್ತ ಉತ್ಸವ ಬಲಿ, ನಡು ದೀಪೋತ್ಸವ, ವಸಂತಕಟ್ಟೆ ಪೂಜೆ, ದೇವರ ನೃತ್ಯಬಲಿ ನಡೆಯಿತು. ಬಳಿಕ ದೊಡ್ಡದರ್ಶನ ಬಲಿ, ಬಟ್ಟಲು ಕಾಣಿಕೆ, ರಾಜಾಂಗಣ ಪ್ರಸಾದ, ಮಹಾಪೂಜೆ, ಧ್ವಜಸ್ತಂಭ ಪೂಜೆ, ಪ್ರಸಾದ ವಿತರಣೆ ನಡೆಯಿತು.