ಸುಳ್ಯ : ಇತಿಹಾಸ ಪ್ರಸಿದ್ಧ ಪೆರುವಾಜೆ ಶ್ರೀ ಜಲದುರ್ಗಾದೇವೀ ದೇವಸ್ಥಾನದಲ್ಲಿ ಜಾತ್ರೆ ಪ್ರಯುಕ ಗುರುವಾರ ಬೆಳಗ್ಗೆ ದೇವರ ಬಲಿ ಹೊರಟು ಉತ್ಸವ, ಮಧ್ಯಾಹ್ನ ಕಲಶಾಭಿಷೇಕ, ಮಹಾಪೂಜೆ, ಪ್ರಸಾದ ವಿತರಣೆ, ರಾತ್ರಿ ದೇವರ ಬಲಿ ಹೊರಟು ಉತ್ಸವ, ವಸಂತ ಕಟ್ಟೆ ಪೂಜೆ, ಅನ್ನಸಂತರ್ಪಣೆ ನಡೆಯಿತು. ವ್ಯವಸ್ಥಾಪನ ಸಮಿತಿ ಅಧ್ಯಕ್ಷ ನಿರಂಜನ ಶೆಟ್ಟಿ ಪಾಲ್ತಾಡು, ಸದಸ್ಯರು, ಅರ್ಚಕ ಶ್ರೀನಿವಾಸ ಹೆಬ್ಟಾರ್ ಉಪಸ್ಥಿತರಿದ್ದರು.
ಜಾತ್ರೆಯಲ್ಲಿ ಇಂದು ಜ. 18ರಂದು ಬೆಳಗ್ಗೆ 8.30ಕ್ಕೆ ದೇವರ ಬಲಿ ಹೊರಟು ಉತ್ಸವ, ದರ್ಶನ ಬಲಿ, ಬಟ್ಟಲು ಕಾಣಿಕೆ, ಪ್ರಸಾದ ವಿತರಣೆ, ಅನ್ನಸಂತರ್ಪಣೆ, ಮಧ್ಯಾಹ್ನ ದೇವರಿಗೆ ಕಲಶಾಭಿಷೇಕ, ಮಹಾಪೂಜೆ, ಪ್ರಸಾದ ವಿತರಣೆ, ರಾತ್ರಿ 7 ಗಂಟೆಗೆ ದೇವರ ಬಲಿ ಹೊರಟು ಉತ್ಸವ, ದೀಪೋತ್ಸವ, ವಸಂತ ಕಟ್ಟೆ ಪೂಜೆ ನಡೆಯಲಿದೆ.