ಸುಬ್ರಹ್ಮಣ್ಯ : ಪುರಾಣ ಪ್ರಸಿದ್ಧ ಹರಿಹರ ಪಳ್ಳತ್ತಡ್ಕ ಶ್ರೀ ಹರಿಹರೇಶ್ವರ ದೇವ ಸ್ಥಾನದಲ್ಲಿ ದೇವರ ಅಷ್ಟಬಂಧ ಬ್ರಹ್ಮಕಲಶೋತ್ಸವ ಗುರುವಾರ ವಿಜೃಂಭಣೆಯಿಂದ ನಡೆಯಿತು.
ಬ್ರಹ್ಮಶ್ರೀ ನೀಲೇಶ್ವರ ಉಚ್ಚಿಲತ್ತಾಯ ಪದ್ಮನಾಭ ತಂತ್ರಿಗಳ ನೇತೃತ್ವದಲ್ಲಿ ವೈದಿಕ ಕಾರ್ಯಕ್ರಮಗಳು ನಡೆದವು. ಬೆಳಗ್ಗೆ ಪ್ರಾಸಾದ ಪ್ರತಿಷ್ಠೆ, ಶ್ರೀ ದೇವರ ಪುನರ್ ಪ್ರತಿಷ್ಠೆ, ಅಷ್ಟಬಂಧ
ಲೇಪನ, ಜೀವಕಲಶಾಭಿಷೇಕ ನೆರವೇರಿತು. ಬಳಿಕ ಪ್ರತಿಷ್ಠಾ ಬಲಿ ಮತ್ತು ಶ್ರೀ ಗಣಪತಿ ದೇವರ ಪುನರ್ ಪ್ರತಿಷ್ಠೆ ನಡೆಯಿತು.
ಮಧ್ಯಾಹ್ನ ಮಹಾಪೂಜೆ ಹಾಗೂ ಅನ್ನಸಂತರ್ಪಣೆ ನಡೆಯಿತು. ದೇವಸ್ಥಾನದ ವ್ಯವಸ್ಥಾಪನ ಸಮಿತಿ ಅಧ್ಯಕ್ಷ ರಾಮಕೃಷ್ಣ ಕುಧ್ಕುಳಿ, ಬ್ರಹ್ಮಕಲ ಶೋತ್ಸವ ಸಮಿತಿ ಅಧ್ಯಕ್ಷ ಕಿಶೋರು
ಕೂಜುಗೋಡು, ಅಭಿವೃದ್ಧಿ ಸಮಿತಿ ಅಧ್ಯಕ್ಷ ಸತೀಶ್ ಕೂಜುಗೋಡು, ಆರ್ಥಿಕ ಸಮಿತಿ ಅಧ್ಯಕ್ಷ ಭವಾನಿಶಂಕರ ಪಿಂಡಿಮನೆ, ವ್ಯವಸ್ಥಾಪನ ಸಮಿತಿ ಸದಸ್ಯರು, ವಿವಿಧ ಸಮಿತಿಗಳ ಅಧ್ಯಕ್ಷರು ಮತ್ತು ಸದಸ್ಯರು ಹಾಗೂ ಭಕ್ತರು ಉಪಸ್ಥಿತರಿದ್ದರು.