ಉಡುಪಿ: ಶ್ರೀ ಕೃಷ್ಣಮಠದ ಮಧ್ವಮಂಟಪದಲ್ಲಿ ಪರ್ಯಾಯ ಶ್ರೀ ಪಲಿಮಾರು ಮಠದ ಆಶ್ರಯದಲ್ಲಿ ಹರಿಕಥಾ ಪರಿಷತ್ತು ಮಂಗಳೂರು ಸಹಯೋಗದೊಂದಿಗೆ ಪ್ರಸ್ತುತಪಡಿಸುವ ಒಂದು ಮಾಸ ನಡೆಯಲಿರುವ ಹರಿಕಥಾ ಯಜ್ಞವನ್ನು ಪಲಿಮಾರು ಶ್ರೀ ವಿದ್ಯಾಧೀಶತೀರ್ಥ ಶ್ರೀಪಾದರು ಉದ್ಘಾಟಿಸಿ ಅನುಗ್ರಹಿಸಿದರು.
ಸುಬ್ರಹ್ಮಣ್ಯ ಮಠದ ಶ್ರೀ ವಿದ್ಯಾಪ್ರಸನ್ನತೀರ್ಥ ಶ್ರೀಪಾದರು, ಅದಮಾರು ಕಿರಿಯ ಯತಿ ಶ್ರೀ ಈಶಪ್ರಿಯ ತೀರ್ಥ ಶ್ರೀಪಾದರು ಉಪಸ್ಥಿತರಿದ್ದರು. ಹರಿಕಥಾ ಪರಿಷತ್ತಿನ ಗೌರವಾಧ್ಯಕ್ಷ ಹರಿಕೃಷ್ಣ ಪುನರೂರು, ಅಧ್ಯಕ್ಷ ಮಹಾಬಲ ಶೆಟ್ಟಿ, ದ.ಕ. ಜಿಲ್ಲಾ ಸಾಹಿತ್ಯ ಪರಿಷತ್ತಿನ ಅಧ್ಯಕ್ಷ ಪ್ರದೀಪ್ ಕುಮಾರ್ ಕಲ್ಕೂರ, ಟ್ರಸ್ಟಿಗಳಾದ ಮಧುಸೂದನ ಅಯ್ಯರ್, ನಾರಾಯಣ ರಾವ್, ನಾಗೇಶ್ ಶೆಟ್ಟಿ, ಶಿವಾನಂದ ಕರ್ಕೇರ, ಎಸ್.ಟಿ. ಗುರುದಾಸ್, ಶರತ್ ಶೆಟ್ಟಿ ಭಾಗವಹಿಸಿದ್ದರು. ಪರಿಷತ್ನ ಸಂಚಾಲಕ ವೈ. ಅನಂತಪದ್ಮನಾಭ ಭಟ್ ಸ್ವಾಗತಿಸಿ, ಕಾರ್ಯದರ್ಶಿ ತೋನ್ಸೆ ಪುಷ್ಕಳ್ ಕುಮಾರ್ ವಂದಿಸಿದರು.