ಕುಂದಾಪುರ: ಇತಿಹಾಸ ಪ್ರಸಿದ್ಧ ಹಟ್ಟಿಯಂಗಡಿ ಶ್ರೀ ಸಿದ್ಧಿವಿನಾಯಕ ದೇವಸ್ಥಾನದಲ್ಲಿ ವಾರ್ಷಿಕ ಮಹೋತ್ಸವದ ಅಂಗವಾಗಿ ಮೇ 20ರಿಂದ ಮೇ 22ರವರೆಗೆ 1008 ತೆಂಗಿನಕಾಯಿ ಅಷ್ಟೋತ್ತರ ಸಹಸ್ರನಾಳಿಕೇರ ಮಹಾ ಗಣಯಾಗ ಮತ್ತು ನವಚಂಡೀ ಹವನ ಸೇರಿದಂತೆ ವಿವಿಧ ಧಾರ್ಮಿಕ ವಿಧಿ ವಿಧಾನಗಳು ನಡೆಯಲಿದೆ.
ಮೇ 20ರಂದು ಬೆಳಗ್ಗೆ 8ರಿಂದ ಶ್ರೀಗುರು ಗಣೇಶ ಪ್ರಾರ್ಥನೆ, ಪುಣ್ಯಾಹ, ನಾಂದೀ, ವಿವಿಧ ಮಂತ್ರ ಜಪಾನುಷ್ಠಾನ, ನವಗ್ರಹ ಹವನ, ಬ್ರಹ್ಮಣಸ್ಪತಿ ಸೂಕ್ತ ಹವನ, ಶ್ರೀಸೂಕ್ತ ಹವನ, ಪುರುಷ ಸೂಕ್ತ ಹವನ, ಲಕ್ಷ್ಮೀನಾರಾಯಣ ಹೃದಯ ಪಾರಾಯಣ ಹಾಗೂ ಹವನ, ಧನ್ವಂತರಿ ಹವನ ನಡೆಯಲಿದೆ. ಮೇ 21ರಂದು ಬೆಳಗ್ಗೆ 8 ರಿಂದ ನವಾಕ್ಷರೀ ಮಂತ್ರಜಪ ಹಾಗೂ ಹವನ, ಗಣಸೂಕ್ತ ಹವನ, ರುದ್ರಪಾರಾಯಣ ಹಾಗೂ ರುದ್ರಹವನ, ದುರ್ಗಾ ಹೋಮ, ಅಥರ್ವಶೀರ್ಷ ಹವನ, ಲಲಿತಾ ಸಹಸ್ರನಾಮ ಹವನ, ಚಂಡಿಕಾ ಪಾರಾಯಣ, ಅ—ವಾಸ ಹೋಮ, ಕಲಾತತ್ವ ಹವನ, ಶ್ರೀ ಸ್ವಾಮಿಗೆ 108 ಕಲಶಾಭಿಷೇಕ ಹಾಗೂ ಕನಕಾಭಿಷೇಕ ಜರಗಲಿದೆ.
ಮೇ 22 ರಂದು ಬೆಳಗ್ಗೆ 8ರಿಂದ ಸಂಕಷ್ಟಹರ ಚತುರ್ಥೀ ದಿನ 1008 ತೆಂಗಿನ ಕಾಯಿ ಅಷ್ಟೋತ್ತರ ಸಹಸ್ರನಾಳಿಕೇರ ಮಹಾ ಗಣಯಾಗ ಮತ್ತು ನವಚಂಡೀ ಹವನ, ಮಹಾ ಪೂಜೆ, ಮಹಾ ಅನ್ನಸಂತರ್ಪಣೆ ಜರಗಲಿದ್ದು, ಸೇವಾಕರ್ತರಾದ ಕುಮಟಾದ ಲೆಕ್ಕ ಪರಿಶೋಧಕ ಜಿ.ಎಸ್. ಕಾಮತ್ ಅವರಿಂದ ಎರಡನೇ ಅಷ್ಟೋತ್ತರ ಸಹಸ್ರನಾಳಿಕೇರ ಮಹಾ ಗಣಯಾಗ ಸೇವೆ ನಡೆಯಲಿದ್ದು, ಈ ಸಂದರ್ಭದಲ್ಲಿ ಶ್ರೀ ಸಂಸ್ಥಾನ ಗೋಕರ್ಣ ಪರ್ತಗಾಳಿ ಜೀವೋತ್ತಮ ಮಠಾಧೀಶ ಶ್ರೀಮದ್ ವಿದ್ಯಾಧಿರಾಜ ತೀರ್ಥ ಶ್ರೀಪಾದ ವಡೇರ ಸ್ವಾಮೀಜಿ ಹಾಗೂ ಪಟ್ಟಶಿಷ್ಯ ಶ್ರೀಮದ್ ಶ್ರೀ ವಿದ್ಯಾಧೀಶ ತೀರ್ಥ ಶ್ರೀಪಾದ ವಡೇರ ಸ್ವಾಮೀಜಿಯವರು ಭಾಗಿಯಾಗಲಿದ್ದಾರೆ. ರಾತ್ರಿ 9.30ಕ್ಕೆ ಸಂಕಷ್ಟ ಷತುರ್ಥಿ ಮಹಾಪೂಜೆ ನಡೆಯಲಿದೆ ದೇವಸ್ಥಾನದ ಧರ್ಮದರ್ಶಿ ಹೆಚ್. ಬಾಲಚಂದ್ರ ಭಟ್ ತಿಳಿಸಿದ್ದಾರೆ.