ಸೋಮವಾರಪೇಟೆ: ಹೊಸಳ್ಳಿ ಗ್ರಾಮದಲ್ಲಿ ನೂತನವಾಗಿ ನಿರ್ಮಾಣವಾಗುತ್ತಿರುವ ಬಸವೇಶ್ವರ ದೇವಾಲಯದಲ್ಲಿ ನಾಗಪ್ರತಿಷ್ಠಾಪನಾ ಮಹೋತ್ಸವ ನಡೆಯಿತು. ದೇವಾಲಯ ಸಮಿತಿ ಪದಾಧಿಕಾರಿಗಳು ಹಾಗೂ ಗ್ರಾಮಸ್ಥರ ಸಮ್ಮುಖದಲ್ಲಿ ಸಕಲೇಶಪುರದ ಪ್ರಸಾದ್ ಭಟ್ ಅವರ ಪೌರೋಹಿತ್ಯದಲ್ಲಿ ವಿವಿಧ ಪೂಜಾ ವಿ—ವಿಧಾನಗಳು ನಡೆದು, ಶುಭಮುಹೂರ್ತದಲ್ಲಿ ನಾಗದೇವರ ವಿಗ್ರಹವನ್ನು ಪ್ರತಿಷ್ಠಾಪಿಸಿ ಅಭಿಷೇಕ ನೆರವೇರಿಸಲಾಯಿತು.