Home ಧಾರ್ಮಿಕ ಸುದ್ದಿ ‘ದೇವಸ್ಥಾನ ಜೀರ್ಣೋದ್ಧಾರದಲ್ಲಿ ತೊಡಗಿಸಿಕೊಳ್ಳಿ’

‘ದೇವಸ್ಥಾನ ಜೀರ್ಣೋದ್ಧಾರದಲ್ಲಿ ತೊಡಗಿಸಿಕೊಳ್ಳಿ’

1441
0
SHARE

ಕೊಣಾಜೆ : ತುಳುನಾಡಿನಲ್ಲಿ ದೈವ, ದೇವಸ್ಥಾನದ ಜೀರ್ಣೋದ್ಧಾರದ ಕಾರ್ಯ ಹೆಚ್ಚೆಚ್ಚು ನಡೆಯುತ್ತಿದ್ದು, ಇಂತಹ ಕೆಲಸಗಳಲ್ಲಿ ಪ್ರತಿಯೊಬ್ಬರು ತೊಡಗಿಸಿಕೊಳ್ಳಬೇಕು ಎಂದು ಉದ್ಯಮಿ ವಿವೇಕ್‌ ಶೆಟ್ಟಿ ಬೊಳ್ಯಗುತ್ತು ಹೇಳಿದರು.

ಅಸೈಗೋಳಿಯ ಶ್ರೀ ಅಯ್ಯಪ್ಪ ಮಂದಿರದ ಬ್ರಹ್ಮಕಲಶೋತ್ಸವದ ಅಂಗವಾಗಿ ನಡೆದ ಧಾರ್ಮಿಕ ಸಭಾ ಕಾರ್ಯಕ್ರಮವನ್ನು ಉದ್ಘಾಟಿಸಿ ಅವರು ಮಾತನಾಡಿದರು.

ಮಾಜಿ ಸಚಿವ ರಮಾನಾಥ ರೈ, ಬ್ರಹ್ಮಕಲಶೋತ್ಸವ ಸಮಿತಿಯ ಅಧ್ಯಕ್ಷ ರವಿಶಂಕರ್‌ ಶೆಟ್ಟಿ ಧಾರ್ಮಿಕ ಮುಖಂಡ ಬಾಬು ಶ್ರೀ ಶಾಸ್ತ ಕಿನ್ಯ ಮಾತನಾಡಿದರು.

ಚಿಲಿಂಬಿ ಶ್ರೀ ಶಿರ್ಡಿ ಸಾಯಿಬಾಬ ಮಂದಿರದ ಆಡಳಿತ ಮೊಕ್ತೇಸರ ವಿಶ್ವಾಸ್‌ದಾಸ್‌, ಅಸೈಗೋಳಿ ಶ್ರೀ ಗುಳಿಗ ಕೊರಗಜ್ಜ ಸೇವ ಸಮಿತಿ ಅಧ್ಯಕ್ಷ ಭಾಸ್ಕರ ಗುಡ್ಡೆಮಾರ್‌, ಮಂಗಳೂರು ಶಿಕ್ಷಕರ ಶಿಕ್ಷಣ ಮಹಾವಿದ್ಯಾಲಯದ ಉಪನ್ಯಾಸಕ ಸದಾನಂದ ಪೂಂಜ, ತಾ.ಪಂ. ಸದಸ್ಯೆ ಪದ್ಮಾವತಿ ಪೂಜಾರಿ, ಬೆಳ್ಮ ಬರಿಕೆ ಶ್ರೀ ಅರಸು ಪೈಂದೋಷ್ಣಯ ಪೊಸಭೂತ ಬಂಟ ದೇವಸ್ಥಾನದ ಆಡಳಿತ ಮೊಕ್ತೇಸರ ಅಶೋಕ್‌ ರೈ ಭಂಡಾರಮನೆ, ಸಂಕಪ್ಪ ಕರ್ಕೇರ ಮುಖ್ಯ ಅತಿಥಿಗಳಾಗಿ ಭಾಗವಹಿಸಿದ್ದರು.

ಸಮಿತಿಯ ಗೌರವಾಧ್ಯಕ್ಷ ರಘುರಾಮ ಕಾಜವ ಪಟ್ಟೋರಿ, ಜೀಣೊìೕದ್ಧಾರ ಸಮಿತಿ ಅಧ್ಯಕ್ಷ ಸೀತಾರಾಮ ಶೆಟ್ಟಿ ದಡಸ್‌, ಗೌರವಾಧ್ಯಕ್ಷ ಸುರೇಶ್‌ ಚೌಟ ಕಕ್ಕೆಮಜಲು, ಪ್ರಶಾಂತ್‌ ಕಾಜವ, ಆರ್ಥಿಕ ಸಮಿತಿ ಸಂಚಾಲಕ ಮಂಜುನಾಥ ಆಳ್ವ, ಕಾರ್ಯಾಧ್ಯಕ್ಷ ವಿಶ್ವನಾಥ ನಾಯ್ಕ, ಸಂಚಾಲಕ ಆನಂದ ಕೆ.ಅಸೈಗೋಳಿ ಉಪಸ್ಥಿತರಿದ್ದರು.

ಬ್ರಹ್ಮಕಲಶೋತ್ಸವ ಸಮಿತಿಯ ಸಂಚಾಲಕ ಶ್ರೀನಿವಾಸ ಶೆಟ್ಟಿ ಪುಲ್ಲು ಪ್ರಸ್ತಾವನೆಗೈದರು. ಪ್ರಚಾರ ಸಮಿತಿಯ ಪ್ರಧಾನ ಸಂಚಾಲಕ ತ್ಯಾಗಂ ಹರೇಕಳ ಸ್ವಾಗತಿಸಿದರು. ಪ್ರ. ಕಾ. ರಾಮಕೃಷ್ಣ ಪಟ್ಟೋರಿ ವಂದಿಸಿದರು. ಬಾಸ್ಕರ ಮಂಜನಾಡಿ ಕಾರ್ಯಕ್ರಮ ನಿರ್ವಹಿಸಿದರು.

LEAVE A REPLY

Please enter your comment!
Please enter your name here