ಜಾಲ್ಸೂರು : ಸಾರ್ವಜನಿಕ ಶ್ರೀ ಗಣೇಶೋತ್ಸವ ಸಮಿತಿ ಜಾಲ್ಸೂರು ಇದರ ಆಶ್ರಯದಲ್ಲಿ 33ನೇ ವರ್ಷದ ಗಣೇಶೋತ್ಸವವು ಶ್ರೀ ಗುರು ರಾಘವೇಂದ್ರ ಸ್ವಾಮಿ ಸಭಾಭವನದಲ್ಲಿ ನಡೆಯಿತು. ಗೌರವಾಧ್ಯಕ್ಷ ಎಸ್. ಜನಾರ್ದನ ಆಚಾರ್ಯ ಅಧ್ಯಕ್ಷತೆ ವಹಿಸಿದ್ದರು. ಹರಿಪ್ರಸಾದ್ ಧಾರ್ಮಿಕ ಉಪನ್ಯಾಸ ನೀಡಿದರು. ಸಾಮೂಹಿಕ ಪ್ರಾರ್ಥನೆ, ಗಣಪತಿ ಹೋಮ, ವಿಗ್ರಹ ಪ್ರತಿಷ್ಠೆ, ಭಜನೆ ಬಳಿಕ ಸ್ಥಳೀಯರಿಗೆ ಹಾಗೂ ವಿದ್ಯಾರ್ಥಿಗಳಿಗೆ ವಿವಿಧ ಕ್ರೀಡಾ ಮತ್ತು ಸಾಂಸ್ಕೃತಿಕ ಸ್ಪರ್ಧೆಗಳು ನಡೆದವು.
ಅಪರಾಹ್ನ ಮಹಾ ಪೂಜೆ, ಪ್ರಸಾದ ವಿತರಣೆ, ಸಾರ್ವಜನಿಕರಿಗೆ ಅನ್ನ ಸಂತರ್ಪಣೆ ಆಯೋಜಿಸಲಾಗಿತ್ತು. ಸಂಜೆ ಶ್ರೀ ಗಣೇಶ ಮೂರ್ತಿಯ ವಿಸರ್ಜನ ಮೆರವಣಿಗೆ ಆಕರ್ಷಕವಾಗಿ ಆಯೋಜನೆಗೊಂಡಿತ್ತು.