ಪುಂಜಾಲಕಟ್ಟೆ: ಬಂಟ್ವಾಳ ತಾಲೂಕು ಉಳಿ ಗ್ರಾಮದ ಕಕ್ಯಬೀಡು ಶ್ರೀ ಪಂಚದುರ್ಗಾಪರಮೇಶ್ವರೀ ದೇವಿ ಕ್ಷೇತ್ರದಲ್ಲಿ ವರ್ಷಾವಧಿ ಜಾತ್ರೆ ಕ್ಷೇತ್ರದ ವೇ| ಮೂ| ನಡ್ವಂತಾಡಿ ಬಾಲಕೃಷ್ಣ ಪಾಂಗಣ್ಣಾಯ ಅವರ ನೇತೃತ್ವದಲ್ಲಿ ವೇದವ್ಯಾಸ ತಂತ್ರಿ ಮತ್ತು ಪ್ರಧಾನ ಅರ್ಚಕ ಶ್ರೀನಿವಾಸ ಅರ್ಮುಡ್ತಾಯ ಅವರ ಸಹಕಾರದಲ್ಲಿ ವಿವಿಧ ವೈದಿಕ, ಧಾರ್ಮಿಕ, ಸಾಂಸ್ಕೃತಿಕ ಕಾರ್ಯಕ್ರಮಗಳೊಂದಿಗೆ ಶುಕ್ರವಾರ ಸಂಪನ್ನಗೊಂಡಿತು.
ವಿವಿಧ ಬ್ಯಾಂಡ್-ವಾದ್ಯಗಳು, ಚೆಂಡೆ ವಾದನ, ಕೀಲು ಕುದುರೆ, ಗೊಂಬೆ, ಸ್ತಬ್ಧ ಚಿತ್ರ, ಹುಲಿ ವೇಷಗಳೊಂದಿಗೆ ಮೆರವಣಿಗೆಯಲ್ಲಿ ಶ್ರೀ ದೇವರ ಪೇಟೆ ಸವಾರಿ ಮತ್ತು ಕಟ್ಟೆಪೂಜೆಯಲ್ಲಿ ಸಾವಿರಾರು ಭಕ್ತರು ಪಾಲ್ಗೊಂಡರು.
ಬೆಳಗ್ಗೆ ಕವಾಟೋದ್ಘಾಟನೆ, ದಿವ್ಯ ದರ್ಶನ, ಮಧ್ಯಾಹ್ನ ಮಹಾಪೂಜೆ, ಅನ್ನಸಂತರ್ಪಣೆ ನಡೆಯಿತು. ರಾತ್ರಿ ಎಲ್.ಸಿ.ಆರ್. ಇಂಡಿಯನ್ ವಿದ್ಯಾಸಂಸ್ಥೆ ಕಕ್ಯಪದವು ಇವರಿಂದ ಸಾಂಸ್ಕೃತಿಕ ವೈಭವ ಕಾರ್ಯಕ್ರಮ ನಡೆಯಿತು. ಬಳಿಕ ಉತ್ಸವ, ದೈವಗಳ ನೇಮ, ನೂತನ ಬ್ರಹ್ಮರಥ ದಲ್ಲಿ ಮಹಾರಥೋತ್ಸವ ನಡೆಯಿತು. ಮಧ್ಯಾಹ್ನ ಶ್ರೀ ಸತ್ಯಸಾಯಿ ಸೇವಾ ಸಮಿತಿ ವತಿಯಿಂದ ಸಾವಿರಾರು ಭಕ್ತರಿ ಮಜ್ಜಿಗೆ ವಿತರಣೆ ನಡೆಯಿತು.
ನೇಮ ಭಂಡಾರ
ಶನಿವಾರ ಬೆಳಗ್ಗೆ ಸಂಪ್ರೋಕ್ಷಣೆ, ಮಹಾಪೂಜೆ, ಮಂತ್ರಾಕ್ಷತೆಯೊಂದಿಗೆ ಮಂಗಳ ನಡೆಯಿತು. ಬಳಿಕ ಕಕ್ಯಬೀಡು ಮೂಲ ಚಾವಡಿಗೆ ನೇಮ ಭಂಡಾರ ನಿರ್ಗಮಿಸಿತು.