ಪುಂಜಾಲಕಟ್ಟೆ: ಉಳಿ ಗ್ರಾಮದ ಕಕ್ಯಬೀಡು ಶ್ರೀ ಪಂಚದುರ್ಗಾಪರಮೇಶ್ವರೀ ದೇವಿ ಕ್ಷೇತ್ರಕ್ಕೆ ಸುಮಾರು 50 ಲಕ್ಷ ರೂ. ವೆಚ್ಚದಲ್ಲಿ ನಿರ್ಮಾಣಗೊಂಡ ನೂತನ ಬ್ರಹ್ಮರಥದ ಸಮರ್ಪಣೆ ಕಾರ್ಯಕ್ರಮ ಜ. 14ರಂದು ರಾತ್ರಿ ಜರಗಿತು. ಮಾಜಿ ಸಚಿವ ಬಿ. ರಮಾನಾಥ ರೈ ಅವರು ರಥದ ದೇವರ ಪೀಠಕ್ಕೆ ಹಾರಾರ್ಪಣೆ ನಡೆಸಿ ರಥವನ್ನು ದೇವಸ್ಥಾನಕ್ಕೆ ಸಮರ್ಪಣೆ ನಡೆಸಿದರು.
ದೇವಸ್ಥಾನದ ಸ್ಥಾಪಕಾಧ್ಯಕ್ಷ ಕೆ. ಜಾರಪ್ಪ ಶೆಟ್ಟಿ ಖಂಡಿಗ, ಜೀರ್ಣೋದ್ಧಾರ ಸಮಿತಿ ಅಧ್ಯಕ್ಷ ಉಳಿ ದಾಮೋದರ ನಾಯಕ್, ಪ್ರ.ಅ. ಶ್ರೀನಿವಾಸ ಅರ್ಮುಡ್ತಾಯ, ಜಿ.ಪಂ. ಸದಸ್ಯ ಬಿ. ಪದ್ಮಶೇಖರ ಜೈನ್, ವಿಜಯ ಬ್ಯಾಂಕ್ ನಿವೃತ್ತ ಅಧಿಕಾರಿ ಬೇಬಿ ಕುಂದರ್, ಸಮಿತಿ ಉಪಾಧ್ಯಕ್ಷರಾದ ಕೆ. ಮಾಯಿಲಪ್ಪ ಸಾಲ್ಯಾನ್, ವಿಶ್ವನಾಥ ಸಾಲ್ಯಾನ್ ಬಿತ್ತ, ಕೋಶಾಧಿಕಾರಿ ಪಿ. ರಾಮಯ್ಯ ಭಂಡಾರಿ, ಕಾರ್ಯದರ್ಶಿ ನಾರಾಯಣ ಪೂಜಾರಿ, ಜತೆ ಕಾರ್ಯದರ್ಶಿ ಅಗ್ಪಲ ಸಂಜೀವ ಗೌಡ, ಉತ್ಸವ ಸಮಿತಿ ಅಧ್ಯಕ್ಷ ವಾಸುದೇವ ಮಯ್ಯ, ಮೊಕ್ತೇಸರ, ಬಾರ್ದಡ್ ಗುತ್ತಿನ ಮನೆಯ ರಾಜವೀರ, ತಾ.ಪಂ. ಸದಸ್ಯೆ ಬೇಬಿ ಕೃಷ್ಣಪ್ಪ, ಉಳಿ ಗ್ರಾ.ಪಂ. ಅಧ್ಯಕ್ಷೆ ದೀನಾಕ್ಷಿ ಮಲ್ಯೋಡಿ, ಮುಂಬಯಿ ಉದ್ಯಮಿ ನಾರಾಯಣ ಶೆಟ್ಟಿ ಕಕ್ಯ, ಉದ್ಯಮಿ ವಿಶ್ವನಾಥ ಶೆಟ್ಟಿ ಬೆದ್ರಾಡಿ, ಉಪ್ಪಿನಂಗಡಿ ದಂತ ವೈದ್ಯ ಡಾ| ರಾಜಾರಾಂ ಕೆ.ಬಿ., ನಿವೃತ್ತ ದೈಹಿಕ ಶಿಕ್ಷಣ ಶಿಕ್ಷಕ ಜಯಾ ಪಿ., ಕುಂಞಣ್ಣ ಶೆಟ್ಟಿ, ಮೋನಪ್ಪ ಪೂಜಾರಿ, ಸರೋಜಿನಿ, ಕಚೇರಿ ವ್ಯವಸ್ಥಾಪಕ ವೀರೇಂದ್ರ ಕುಮಾರ್ ಜೈನ್, ಶ್ರೀ ಸತ್ಯ ಸಾಯಿ ಸೇವಾ ಸಮಿತಿ, ಐವೆರ್ ಫ್ರೆಂಡ್ಸ್, ಶಿವಾಜಿ ಫ್ರೆಂಡ್ಸ್, ಜೀರ್ಣೋದ್ಧಾರ ಸಮಿತಿ, ಉತ್ಸವ ಸಮಿತಿ ಸದಸ್ಯರು ಉಪಸ್ಥಿತರಿದ್ದರು.