Home ಧಾರ್ಮಿಕ ಸುದ್ದಿ ಕಕ್ಯಪದವು ಬ್ರಹ್ಮ ಬೈದರ್ಕಳ ಗರೋಡಿ ದೈವಗಳ ಪುನಃಪ್ರತಿಷ್ಠೆ, ಬ್ರಹ್ಮಕಲಶಾಭಿಷೇಕ

ಕಕ್ಯಪದವು ಬ್ರಹ್ಮ ಬೈದರ್ಕಳ ಗರೋಡಿ ದೈವಗಳ ಪುನಃಪ್ರತಿಷ್ಠೆ, ಬ್ರಹ್ಮಕಲಶಾಭಿಷೇಕ

1234
0
SHARE

ಪುಂಜಾಲಕಟ್ಟೆ: ಸುಮಾರು 3 ಕೋಟಿ ರೂ. ವೆಚ್ಚದಲ್ಲಿ, ತೌಳವ ದ್ರಾವಿಡ ಶೈಲಿಯಲ್ಲಿ, ಸಂಪೂರ್ಣ ಶಿಲಾಮಯವಾಗಿ ಪುನರ್‌ ನಿರ್ಮಾಣಗೊಂಡಿರುವ ಬಂಟ್ವಾಳ ತಾಲೂಕಿನ ಉಳಿ ಗ್ರಾಮದ ಕಕ್ಯಪದವು ಶ್ರೀ ಕಡಂಬಿಲ್ತಾಯಿ, ಕೊಡಮಣಿತ್ತಾಯಿ, ಬ್ರಹ್ಮಬೈದರ್ಕಳ ಗರೋಡಿಯಲ್ಲಿ ರವಿವಾರ ದೈವಗಳ ಪುನಃಪ್ರತಿಷ್ಠೆ, ಬ್ರಹ್ಮಕಲಶಾಭಿಷೇಕ ಕಾರ್ಯಕ್ರಮಗಳು ಜರಗಿದವು.

ಬ್ರಹ್ಮಶ್ರೀ ನಡ್ವಂತಾಡಿ ಬಾಲಕೃಷ್ಣ ಪಾಂಗಣ್ಣಾಯ ಮತ್ತು ಕಕ್ಯ ಶ್ರೀನಿವಾಸ ಅರ್ಮುಡ್ತಾಯರ ಮಾರ್ಗದರ್ಶನದಲ್ಲಿ, ಕ್ಷೇತ್ರದ ಆಸ್ರಣ್ಣ ರಾಜೇಂದ್ರ ಅರ್ಮುಡ್ತಾಯ, ಪೆಜಕಕ್ಲ ಗಂಗಾಧರ ಕಕೃಣ್ಣಾಯ ಅವರ ಮುಂದಾಳತ್ವದಲ್ಲಿ ವಿವಿಧ ಧಾರ್ಮಿಕ ಕಾರ್ಯಕ್ರಮಗಳು ನಡೆದವು. ಬೆಳಗ್ಗೆ ಬ್ರಹ್ಮಕಲಶ ಆರಾಧನೆ, ಪ್ರಧಾನ ಹೋಮಗಳು, ಬಳಿಕ ಕರ್ಕಾಟಕ ಲಗ್ನ ಸುಮೂಹೂರ್ತದಲ್ಲಿ ಶಿಖರ ಪ್ರತಿಷ್ಠೆ, ಶ್ರೀ ಕಡಂಬಿಲ್ತಾಯಿ, ಕೊಡಮಣಿ ತ್ತಾಯಿ, ಬ್ರಹ್ಮಬೈದರ್ಕಳ, ದೈವೊಂಕುಳು, ಮಾಯಂದಾಲ್ ದೈವಗಳ ಪ್ರತಿಷ್ಠೆ, ಧ್ವಜಸ್ತಂಭ ಪ್ರತಿಷ್ಠೆ, ಬ್ರಹ್ಮಕಲಶಾಭಿಷೇಕ, ಪರ್ವಗಳು, ಮಹಾ ಪೂಜೆ, ಧ್ವಜಾ ರೋಹಣ, ಪಲ್ಲಪೂಜೆ, ಕೋಟಿ- ಚೆನ್ನಯರ ದರ್ಶನ ಮೊದಲಾದ ವೈದಿಕ, ಧಾರ್ಮಿಕ ವಿಧಿ ವಿಧಾನಗಳು ನಡೆದವು. ಸಂಜೆ ಕಕ್ಯಗುತ್ತು ಬೋಂಟ್ರರ ಮನೆಯಿಂದ ದೈವೋಂಕುಳು ಭಂಡಾರ ಬಂದು ರಾತ್ರಿ ನೇಮ ಸಂಕ್ರಾತಿ ಸೇವೆಗಳು ನಡೆಯಿತು. ರಾತ್ರಿ ಧಾರ್ಮಿಕ ಸಭೆ ನಡೆಯಿತು.

ಸಾಂಸ್ಕೃತಿಕ ಕಾರ್ಯಕ್ರಮಗಳ ಅಂಗವಾಗಿ ಮಧ್ಯಾಹ್ನ ಜಿಲ್ಲೆಯ ಖ್ಯಾತ ಕಲಾವಿದರಿಂದ ಯಕ್ಷಗಾನ ತಾಳಮದ್ದಳೆ, ರಾತ್ರಿ ರಾಷ್ಟ್ರ ಪ್ರಶಸ್ತಿ ಪುರಸ್ಕೃತ ಜ್ಞಾನ ಐತಾಳ್‌ ಮತ್ತು ಬಳಗದವರಿಂದ ಹೆಜ್ಜೆನಾದ ನೃತ್ಯ ಸಂಗೀತ ವೈಭವ ಕಾರ್ಯಕ್ರಮ ನಡೆಯಿತು.

ಮಾಜಿ ಸಚಿವ, ಬ್ರಹ್ಮಕಲಶೋತ್ಸವ ಸಮಿತಿ ಗೌರವಾಧ್ಯಕ್ಷ ಬಿ. ರಮಾನಾಥ ರೈ, ಬಂಟ್ವಾಳ ಶಾಸಕ ರಾಜೇಶ್‌ ನಾೖಕ್‌ ಉಳಿಪ್ಪಾಡಿಗುತ್ತು, ಅಧ್ಯಕ್ಷ ಸೇಸಪ್ಪ ಕೋಟ್ಯಾನ್‌, ಮೋಕ್ತೇಸರ ಕುಟುಂಬಸ್ಥರಾದ ರಾಜವೀರ್‌ ಜೈನ್‌, ಸಂಚಾಲಕರಾದ ಚಿತ್ತರಂಜನ್‌ ಕಂಕನಾಡಿ, ರೋಹಿನಾಥ ಪಾದೆ, ಕಾರ್ಯಾಧ್ಯಕ್ಷ ಬಿ. ಪದ್ಮಶೇಖರ ಜೈನ್‌, ಶ್ರೀಕ್ಷೇತ್ರ ಪಡ್ಯಾರಬೆಟ್ಟುವಿನ ಆನುವಂಶಿಕ ಆಡಳಿತ ಮೋಕ್ತೇಸರ ಜೀವಂಧರ್‌ ಕುಮಾರ್‌, ಜೀರ್ಣೋದ್ಧಾರ ಸಮಿತಿ ಅಧ್ಯಕ್ಷ ಕೆ. ಮಾಯಿಲಪ್ಪ ಸಾಲ್ಯಾನ್‌, ವಾಸ್ತುಶಿಲ್ಪಿ ಪ್ರಮಲ್ ಕುಮಾರ್‌, ಪುನರ್‌ ನಿರ್ಮಾಣ ಮೇಲುಸ್ತುವಾರಿ ಸಮಿತಿ ಅಧ್ಯಕ್ಷ ಎ. ಚೆನ್ನಪ್ಪ ಸಾಲ್ಯಾನ್‌ ಆಜೋಡಿ, ಉತ್ಸವ ಸಮಿತಿ ಅಧ್ಯಕ್ಷ ವಿಶ್ವನಾಥ ಸಾಲ್ಯಾನ್‌ ಬಿತ್ತ ಮತ್ತಿತರ ಸಮಿತಿಗಳ ಪದಾಧಿಕಾರಿಗಳು, ಸದಸ್ಯರು ಭಾಗವಹಿಸಿದ್ದರು.

ಮಧ್ಯಾಹ್ನ, ರಾತ್ರಿ ಮಹಾ ಅನ್ನಸಂತರ್ಪಣೆ ನಡೆಯಿತು. ಸಾವಿರಾರು ಭಕ್ತರುರ್ಯಕ್ರಮದಲ್ಲಿ ಭಾಗವಹಿಸಿದರು.

LEAVE A REPLY

Please enter your comment!
Please enter your name here