Home ಧಾರ್ಮಿಕ ಸುದ್ದಿ ಕುರಿಯಾಳಕೊಪ್ಪ: ಪ್ರತಿಷ್ಠಾ ವಾರ್ಷಿಕೋತ್ಸವ, ಜಾತ್ರೆ

ಕುರಿಯಾಳಕೊಪ್ಪ: ಪ್ರತಿಷ್ಠಾ ವಾರ್ಷಿಕೋತ್ಸವ, ಜಾತ್ರೆ

1169
0
SHARE

ಕಲ್ಲುಗುಡ್ಡೆ : ನೂಜಿಬಾಳ್ತಿಲ ಗ್ರಾಮದ ಕುರಿಯಾಳಕೊಪ್ಪ ಶ್ರೀ ಲಕ್ಷ್ಮೀ ಜನಾರ್ದನ ದೇವಸ್ಥಾನದ 4ನೇ ವರ್ಷದ ಪ್ರತಿಷ್ಠಾ ವಾರ್ಷಿಕೋತ್ಸವ, ಜಾತ್ರೆಯು ಕ್ಷೇತ್ರದ ತಂತ್ರಿ ಕೆಮ್ಮಿಂಜೆ ನಾಗೇಶ ತಂತ್ರಿ ಹಾಗೂ ಕ್ಷೇತ್ರದ ಅರ್ಚಕ ಕೆ. ವೆಂಕಟ್ರಮಣ ಅಮ್ಮಣ್ಣಾಯ ನೇತೃತ್ವದಲ್ಲಿ ಧಾರ್ಮಿಕ ವಿಧಾನಗಳೊಂದಿಗೆ ನಡೆಯಿತು.

ಗೊನೆ ಮುಹೂರ್ತ, ಭಕ್ತರಿಂದ ಹಸುರುವಾಣಿ ಸಮರ್ಪಣೆ,
ದುರ್ಗಾಪೂಜೆ, ರಂಗಪೂಜೆ ನಡೆದು ಸೋಮವಾರ ಉಗ್ರಾಣ ಮುಹೂರ್ತ
ಹಾಗೂ ಮಂಗಳವಾರ ಪೂರ್ವಾಹ್ನ ದೇವತಾ ಪ್ರಾರ್ಥನೆ, ಆಚಾರ್ಯವಣ, ಮಹಾಗಣಪತಿ ಹೋಮ, ಪಂಚವಿಂಶತಿ ಕಲಶ ಪೂಜೆ ಬಳಿಕ ಮೂರಾಜೆ ಶ್ರೀ ಅಯ್ಯಪ್ಪ ಭಜನ ಮಂಡಳಿ ಹಾಗೂ ಕಲ್ಲುಗುಡ್ಡೆ ಅಪ್ಪೆಜಕ್ಕೆಲ್‌ ಸಹೋದರರಿಂದ ಭಜನೆ ನಡೆಯಿತು.

ಅಪರಾಹ್ನ ಶ್ರೀ ದೇವರಿಗೆ ಕಲಶಾಭಿಷೇಕ, ಮಹಾಪೂಜೆ, ಪ್ರಸಾದ ವಿತರಣೆ
ನಡೆಯಿತು. ಸಂಜೆ ಕುರಿಯಾಳ ಕೊಪ್ಪ ಶ್ರೀ ಲಕ್ಷ್ಮೀ ಜನಾರ್ದನ ಭಜನ ಮಂಡಳಿ, ಇಚ್ಲಂಪಾಡಿ ಶಂಖದೀಪ ಭಜನ ಮಂಡಳಿ ವತಿಯಿಂದ ಭಜನೆ ಜರಗಿತು. ರಾತ್ರಿ ಮಹಾಪೂಜೆ, ಶ್ರೀ ದೇವರ ಬಲಿ, ಶ್ರೀ ಭೂತಬಲಿ ಮಹೋತ್ಸವ, ವಸಂತಕಟ್ಟೆ
ಪೂಜೆ, ದರ್ಶನ ಬಲಿ ಉತ್ಸವ, ಬಟ್ಟಲು ಕಾಣಿಕೆ, ವೈದಿಕ ಮಂತ್ರಾಕ್ಷತೆ ಬಳಿಕ ಸಿಡಿಮದ್ದು ಪ್ರದರ್ಶನ ನಡೆಯಿತು.

LEAVE A REPLY

Please enter your comment!
Please enter your name here