Home ಧಾರ್ಮಿಕ ಸುದ್ದಿ ಕಲ್ಮಾಡಿ ಸ್ಟೆಲ್ಲಾ ಮಾರೀಸ್ ಚರ್ಚ್; ನೊವೆನಾ ಪ್ರಾರ್ಥನೆಗೆ ಚಾಲನೆ

ಕಲ್ಮಾಡಿ ಸ್ಟೆಲ್ಲಾ ಮಾರೀಸ್ ಚರ್ಚ್; ನೊವೆನಾ ಪ್ರಾರ್ಥನೆಗೆ ಚಾಲನೆ

1298
0
SHARE

ಉಡುಪಿ: ಇಲ್ಲಿನ ಕಲ್ಮಾಡಿ ಸ್ಟೆಲ್ಲಾ ಮಾರೀಸ್ ಚರ್ಚ್ ವಾರ್ಷಿಕ ಮಹೋತ್ಸವಕ್ಕೆ ಪೂರ್ವಭಾವಿಯಾಗಿ ಒಂಬತ್ತು ದಿನಗಳ ನೊವೆನಾ ಪ್ರಾರ್ಥನೆಗೆ ಭಾನುವಾರ ಸಂಜೆ ಚಾಲನೆ ನೀಡಲಾಯಿತು. ಈ ಒಂಬತ್ತು ದಿನಗಳ ನೊವೆನಾ ಪ್ರಾರ್ಥನೆಗೆ ಉಡುಪಿ ಧರ್ಮಪ್ರಾಂತ್ಯದ ಕುಲಪತಿಗಳು ಹಾಗೂ ಉದ್ಯಾವರ ಚರ್ಚ್ ನ ಧರ್ಮಗುರುಗಳಾದ ವಂದನೀಯ ಸ್ಟ್ಯಾನಿ ಬಿ ಲೋಬೊ ಅವರು ಚರ್ಚ್ ಆವರಣದಲ್ಲಿ ವೆಲಂಕಣಿ ಮಾತೆಯ ಧ್ವಜವನ್ನು ಏರಿಸುವುದರ ಮೂಲಕ ಚಾಲನೆ ನೀಡಿದರು. ಬಳಿಕ ಅವರು ಪವಿತ್ರ ಬಲಿ ಪೂಜೆಯನ್ನು ನೆರವೇರಿಸಿ ಸಂದೇಶ ನೀಡಿದರು.

ಪ್ರತಿ ವರ್ಷ ಆಗಸ್ಟ್ ತಿಂಗಳಲ್ಲಿ ನಡೆಯುವ ಈ ಮಹೋತ್ಸವದಲ್ಲಿ ಸಹಸ್ರಾರು ಭಕ್ತಾದಿಗಳು ಅತ್ಯಧಿಕ ಸಂಖ್ಯೆಯಲ್ಲಿ ಪಾಲ್ಗೊಳ್ಳುವರು. ಕಲ್ಮಾಡಿಯ ಈ ಸುಂದರ ಪರಿಸರದಲ್ಲಿ ನಿರ್ಮಾಣವಾಗಿರುವ ಹಡಗಿನ ಮಾದರಿಯ ಈ ಪುಣ್ಯ ಕ್ಷೇತ್ರವು ಪ್ರಸಿದ್ಧ ಯಾತ್ರಾ ಸ್ಥಳವಾಗಿ ರೂಪುಗೊಂಡಿದೆ.

LEAVE A REPLY

Please enter your comment!
Please enter your name here