ಪುಂಜಾಲಕಟ್ಟೆ : ಪುರಾಣ ಪ್ರಸಿದ್ಧ ಭೂ ಕೈಲಾಸ ಪ್ರತೀತಿಯ ಬಂಟ್ವಾಳ ತಾ| ಕಾವಳಮೂಡೂರು ಗ್ರಾಮದ ಮಹ ತೋಭಾರ ಶ್ರೀ ಕಾರಿಂಜೇಶ್ವರ ದೇವಸ್ಥಾನ ದಲ್ಲಿ ಸೋಮವಾರ ಅಷ್ಠಬಂಧ ಸಹಿತ ಶ್ರೀ ದೇವರಿಗೆ ಬ್ರಹ್ಮಕಲಶಾಭಿಷೇಕ ನಡೆಯಿತು.
ಬ್ರಹ್ಮಶ್ರೀ ವರ್ಕಾಡಿ ಗಣೇಶ ತಂತ್ರಿ ಹಾಗೂ ಪ್ರ.ಅರ್ಚಕ ವೇ| ಮೂ| ನಟರಾಜ ಉಪಾಧ್ಯಾಯ ಅವರ ಸಹಕಾರದಲ್ಲಿ ಬೆಳಗ್ಗೆ ಗಂಟೆ 6.50ರ ಮೀನ ಲಗ್ನದಲ್ಲಿ ಶ್ರೀ ಕಾರಿಂಜೇಶ್ವರ ದೇವರಿಗೆ ಮತ್ತು ಶ್ರೀ ಪಾರ್ವತಿ ದೇವರಿಗೆ ಬ್ರಹ್ಮ ಕಲಶಾಭಿಷೇಕ ನಡೆಯಿತು.
ಬ್ರಹ್ಮಕಲಶೋತ್ಸವದಲ್ಲಿ ಸಾವಿರಾರು ಭಕ್ತರು ಭಾಗವಹಿಸಿ ಶ್ರೀ ದೇವರ ದರ್ಶನ, ಪ್ರಸಾದ ಪಡೆದರು. ಭಕ್ತರಿಗೆ ಪಾನಕ, ಫಲಾಹಾರ ವ್ಯವಸ್ಥೆ ಮಾಡಲಾಗಿತ್ತು. ಮಧ್ಯಾಹ್ನ ಅನ್ನಸಂತರ್ಪಣೆ ನಡೆಯಿತು. ಸಂಜೆ ರಂಗಪೂಜೆ, ಉತ್ಸವ, ದೈವಗಳಿಗೆ ಗಗ್ಗರ ಸೇವೆ, ರಥೋತ್ಸವ ನಡೆಯಿತು.
ರಾಜ್ಯ ಅರಣ್ಯ ಸಚಿವ ಬಿ. ರಮಾನಾಥ ರೈ, ತಾಲೂಕು ಅಕ್ರಮ ಸಕ್ರಮ ಸಮಿತಿ ಅಧ್ಯಕ್ಷ ಮಾಯಿಲಪ್ಪ ಸಾಲ್ಯಾನ್, ವ್ಯವಸ್ಥಾಪನ ಸಮಿತಿ ಅಧ್ಯಕ್ಷ ಪಿ.ಜಿನರಾಜ ಆರಿಗ ಪಚ್ಚಾಜೆ ಗುತ್ತು ಮತ್ತು ಸದಸ್ಯರು, ಬ್ರಹ್ಮಕಲಶೋತ್ಸವ ಸಮಿತಿ ಉಪಾಧ್ಯಕ್ಷ ಬಿ.ಪದ್ಮಶೇಖರ ಜೈನ್ ಮತ್ತಿತರ ಪದಾಧಿಕಾರಿಗಳು, ತಾಲೂಕು ಪಂಚಾಯತ್ ಸ್ಥಾಯಿ ಸಮಿತಿ ಅಧ್ಯಕ್ಷೆ ಧನಲಕ್ಷ್ಮಿ ಸಿ.ಬಂಗೇರ ಭಾಗವಹಿಸಿದ್ದರು.