ಕಾರ್ಕಳ: ನೆಕ್ಲಾಜೆ ಶ್ರೀ ಕಾಳಿಕಾಂಬ ದೇವಸ್ಥಾನಕ್ಕೆ ಕಾಳಹಸ್ತೇಂದ್ರ ಸರಸ್ವತೀ ಮಹಾಸ್ವಾಮೀಜಿಗಳವರು ಜು. 12ರಂದು ಭೇಟಿ ನೀಡಿದರು.
ಜು. 16ರಿಂದ ಪಡುಕುತ್ಯಾರುವಿನಲ್ಲಿ ಜರಗುವ ಚಾತುರ್ಮಾಸ್ಯ ವೃತಾಚರಣೆಯ ಅಂಗವಾಗಿ ಮಹಾಸ್ವಾಮೀಜಿಯವರು ನೆಕ್ಲಾಜೆ ದೇವಸ್ಥಾನಕ್ಕೆ ಭೇಟಿ ನೀಡಿದರು. ಕಟಪಾಡಿ ಶ್ರೀಮದ್ ಆನೆಗುಂದಿ ಜಗದ್ಗುರು ಮಹಾಸಂಸ್ಥಾನ ಸರಸ್ವತೀ ಪೀಠ ಪ್ರತಿಷ್ಠಾನದ ಅಧ್ಯಕ್ಷ ಸೂರ್ಯಕುಮಾರ್ ಹಳೆಯಂಗಡಿ, ಉಪಾಧ್ಯಕ್ಷ ಹರೀಶ್ ಆಚಾರ್ಯ ಕಾರ್ಕಳ, ಅಭಿವೃದ್ಧಿ ಸಮಿತಿಯ ಅಧ್ಯಕ್ಷ ಶಿಲ್ಪಿ ಸತೀಶ್ ಆಚಾರ್ಯ, ಆನೆಗುಂದಿ ಶ್ರೀ ಸರಸ್ವತಿ ಎಜ್ಯುಕೇಶನ್ ಟ್ರಸ್ಟ್ನ ಅಧ್ಯಕ್ಷ ಸುಧಾಕರ ಆಚಾರ್ಯ ತ್ರಾಸಿ, ನೆಕ್ಲಾಜೆ ಶ್ರೀ ಕಾಳಿಕಾಂಬ ದೇವಸ್ಥಾನದ ಆಡಳಿತ ಮೊಕ್ತೇಸರ ಕೆ. ರತ್ನಾಕರ ಆಚಾರ್ಯ, ಶಿಲ್ಪಿ ರಾಮಚಂದ್ರ ಆಚಾರ್ಯ, ಪಿ. ರವಿ ಆಚಾರ್ಯ, ಮಾಜಿ ಆಡಳಿತ ಮೊಕ್ತೇಸರ ಸುಧಾಕರ ಆಚಾರ್ಯ, ಸತೀಶ್ ಆಚಾರ್ಯ, ದೇವಸ್ಥಾನದ ಪ್ರಧಾನ ಅರ್ಚಕ ವಿಠಲ್ ಪುರೋಹಿತ್, ಜಗದೀಶ್ ಆಚಾರ್ಯ ಮೊದಲಾದವರು ಉಪಸ್ಥಿತರಿದ್ದರು.
ಕೆ. ರತ್ನಾಕರ ಆಚಾರ್ಯ ಸ್ವಾಗತಿಸಿದರು. ಸುರೇಶ್ ಆಚಾರ್ಯ ಕಾರ್ಯಕ್ರಮ ನಿರೂಪಿಸಿ, ವಂದಿಸಿದರು.