ಮೂಲ್ಕಿ : ದೈವಸ್ಥಾನ ಮತ್ತು ದೇವಾಲಯಗಳು ಅಭಿವೃದ್ಧಿಯಾದಾಗ ಗ್ರಾಮಗಳ ಸಮಗ್ರ ಬೆಳವಣಿಗೆ ಸಾಧ್ಯವಾಗುತ್ತದೆ ಎಂದು ಬಪ್ಪನಾಡು ದೇವಸ್ಥಾನದ ಅಭಿವೃದ್ಧಿ ಸಮಿತಿಯ ಕಾರ್ಯಾಧ್ಯಕ್ಷ ಕಿಲ್ಪಾಡಿ ಬಂಡಸಾಲೆ ಶೇಖರ್ ಶೆಟ್ಟಿ ಅವರು ಹೇಳಿದರು.
ಆದಿ ಕಿಲ್ಲಾಡಿ ಶ್ರೀ ಧೂಮಾವತಿ ಪರಿವಾರ ದೈವಗಳ ದೈವಸ್ಥಾನದ ನೂತನ ಗೋಪುರದ ಶಿಲಾನ್ಯಾಸ ನೆರವೇರಿಸಿ ಅವರು ಮಾತನಾಡಿದರು. ಮಾನಂಪಾಡಿ ರಾಘವೆಂದ್ರ ಭಟ್ ಅವರು ವಿಶೇಷ ಪ್ರಾರ್ಥನೆ ನಡೆಸಿದರು.
ದ.ಕ. ಜಿ.ಪಂ. ಉಪಾಧ್ಯಕ್ಷೆ ಕಸ್ತೂರಿ ಪಂಜ ಅವರು ದೀಪ ಬೆಳಗಿಸಿ ಕಾರ್ಯ ಕ್ರಮವನ್ನು ಉದ್ಘಾಟಿಸಿದರು. ಉದ್ಯಮಿ ಹೇಮರಾಜ್ ಡಿ. ಅಮೀನ್ ಮನವಿ ಪತ್ರವನ್ನು ಬಿಡುಗಡೆಗೊಳಿಸಿದರು. ತಾ.ಪಂ. ಮಾಜಿ ಅಧ್ಯಕ್ಷ ರಂಗನಾಥ ಶೆಟ್ಟಿ, ತಾ.ಪಂ. ಸದಸ್ಯ ಶರತ್ ಕುಬೆವೂರು, ವಿನಯ ವಿ. ಸುವರ್ಣ, ಮಹೇಂದ್ರ ಬಂಗೇರ, ಭಾರತಿ ವಿ. ಅಮೀನ್, ಕೇಶವ ಅಮೀನ್ ಉಪಸ್ಥಿತರಿದ್ದರು. ಅಧ್ಯಕ್ಷ ಗೋಪಿನಾಥ ಪಡಂಗ ಸ್ವಾಗತಿಸಿದರು. ಸತೀಶ್ ಕಿಲ್ಪಾಡಿ ನಿರೂಪಿಸಿದರು. ಅಶೋಕ್ ಸುವರ್ಣ ವಂದಿಸಿದರು.