ಕೊಲ್ಲೂರು: ಕೊಲ್ಲೂರು ಶ್ರೀ ಮೂಕಾಂಬಿಕಾ ದೇವಿಯ ಜನ್ಮಾಷ್ಠಮಿಯ ಪ್ರಯುಕ್ತ ಜೂ. 10 ರಂದು ರಾತ್ರಿ ದೇಗುಲದಲ್ಲಿ ರಥೋತ್ಸವ ನಡೆಯಿತು.
ಶತಚಂಡಿಯಾಗ ಹಾಗೂ ವಿವಿಧ ಧಾರ್ಮಿಕ ಕಾರ್ಯಕ್ರಮಗಳ ಅನಂತರ ನಡೆದ ಮಳೆಗಾಲದ ಕೊನೆಯ ರಥೋತ್ಸವದಲ್ಲಿ ನಾನಾ ರಾಜ್ಯಗಳಿಂದ ಆಗಮಿಸಿದ್ದ ಸಹಸ್ರಾರು ಭಕ್ತರು ಪಾಲ್ಗೊಂಡಿದ್ದರು. ದೇಗುಲದ ಅರ್ಚಕರು, ಕಾರ್ಯನಿರ್ವಹಣಾಧಿಕಾರಿ ಎಚ್.ಹಾಲಪ್ಪ, ವ್ಯವಸ್ಥಾಪನ ಸಮಿತಿಯ ಅಧ್ಯಕ್ಷ ಹರೀಶ್ ಕುಮಾರ್ ಶೆಟ್ಟಿ, ಸದಸ್ಯರು ಉಪಸ್ಥಿತರಿದ್ದರು. ಈ ಸಂದರ್ಭ ಭಕ್ತರು ದೇವಿ ಸ್ತೋತ್ರ ಪಠಣ ನಡೆಸಿದರು.