ಕಾಣಿಯೂರು : ದೇವಸ್ಥಾನದ ಜೀರ್ಣೋದ್ಧಾರ ಕಾರ್ಯಗಳಲ್ಲಿ ಪಾಲ್ಗೊಳ್ಳುವ ಅವಕಾಶ ಪುಣ್ಯದಾಯಕ. ಈ ನಿಟ್ಟಿನಲ್ಲಿ ದೇವಸ್ಥಾನದ ಜೀರ್ಣೋದ್ದಾರ ಕಾರ್ಯದಲ್ಲಿ ಎಲ್ಲರೂ ತೊಡಗಿಸಿ ಸಹಕರಿಸುವಂತೆ ಕುಕ್ಕಟ್ಟೆ ಶ್ರೀ ಕಾಳಿಕಾಪರಮೇಶ್ವರಿ ಭದ್ರಕಾಳಿ ದೇವಸ್ಥಾನದ ಆಡಳಿತ ಸಮಿತಿ ಅಧ್ಯಕ್ಷ ಬಿ.ಕೆ. ಧನಂಜಯ ಆಚಾರ್ಯ ಏನೆಕಲ್ಲು ಹೇಳಿದರು.
ಅವರು ಎ. 10ರಂದು ನಡೆದ ಮುರುಳ್ಯ ಗ್ರಾಮದ ಕುಕ್ಕಟ್ಟೆ ಶ್ರೀ ಕಾಳಿಕಾ ಪರಮೇಶ್ವರಿ ಭದ್ರಕಾಳಿ ದೇವಸ್ಥಾನದಲ್ಲಿ ಗರ್ಭಗುಡಿಯ ಶಿಲಾನ್ಯಾಸ ಕಾರ್ಯಕ್ರಮದಲ್ಲಿ ಮಾತನಾಡಿದರು.
ಕ್ಷೇತ್ರದ ತಂತ್ರಿಗಳಾದ ವೇ|ಮೂ| ಕೇಶವ ತಂತ್ರಿಗಳು ಅಂಕಶಾಲೆ, ಮೂಡುಬಿದಿರೆ ಅವರು ವಿವಿಧ ವೈದಿಕ ಕಾರ್ಯಕ್ರಮಗಳನ್ನು ನೆರವೇರಿಸಿದರು. ಶಿಲ್ಪಿ ಕೃಷ್ಣ ಆಚಾರ್ಯ ಕಾರ್ಕಳ, ಕುಕ್ಕಟ್ಟೆ ಶ್ರೀ ಕಾಳಿಕಾ ಪರಮೇಶ್ವರಿ ಭದ್ರಕಾಳಿ ದೇವಸ್ಥಾನದ ಆನುವಂಶಿಕ ಮೊಕ್ತೇಸರ ಜನಾರ್ದನ ಆಚಾರ್ಯ ಕುಕ್ಕಟ್ಟೆ, ಜೀರ್ಣೋದ್ಧಾರ ಸಮಿತಿ ಗೌರವಾಧ್ಯಕ್ಷ ಬಾಲಕೃಷ್ಣ ಮರೋಳಿ, ಆಡಳಿತ ಸಮಿತಿ ಅಧ್ಯಕ್ಷ ಬಿ.ಕೆ. ಧನಂಜಯ ಆಚಾರ್ಯ ಏನೆಕಲ್ಲು, ಜೀರ್ಣೋದ್ಧಾರ ಸಮಿತಿಯ ಅಧ್ಯಕ್ಷ ಹರಿಶ್ಚಂದ್ರ ಆಚಾರ್ಯ ಇಳಂತಲ, ಗೋಪಾಲ ಮೇಸ್ತ್ರಿ ಬೆಳ್ಳಾರೆ ಉಪಸ್ಥಿತರಿದ್ದರು.
ಬಾಲಕೃಷ್ಣ ಪುರೋಹಿತ್ ಕುಕ್ಕಟ್ಟೆ ಸ್ವಾಗತಿಸಿ, ಪುರುಷೋತ್ತಮ ಆಚಾರ್ಯ ಕುಕ್ಕಟ್ಟೆ ವಂದಿಸಿದರು.