ಮುಂಡೂರು : ಇಲ್ಲಿನ ಕುಕ್ಕಿನಡ್ಕ ಶ್ರೀ ಸುಬ್ರಾಯ ದೇವಸ್ಥಾನದಲ್ಲಿ ಪ್ರತಿಷ್ಠಾ ವರ್ಧಂತಿ ಜಾತ್ರೆ, ಧರ್ಮದೈವಗಳ ನೇಮ ಮಾ. 8 ಹಾಗೂ 9ರಂದು ನಡೆಯಿತು. ಬ್ರಹ್ಮಶ್ರೀ ವೇ|ಮೂ| ತಂತ್ರಿ ಸುಬ್ರಹ್ಮಣ್ಯ ಬಳ್ಳಕ್ಕುರಾಯರ ನೇತೃತ್ವದಲ್ಲಿ ಧಾರ್ಮಿಕ ವಿಧಿ-ವಿಧಾನ ನಡೆಯಿತು.
ಮಾ. 7ರಂದು ಸಂಜೆ ಹೊರೆಕಾಣಿಕೆ ಸಮರ್ಪಣೆ, ರಂಗಪೂಜೆ, ಮಾ. 8ರಂದು ಬೆಳಗ್ಗೆ ದೇವತಾ ಪ್ರಾರ್ಥನೆ, ಕಲಶಾರಾಧನೆ, ಕಲಶಾಭಿಷೇಕ, ನಾಗ ಸನ್ನಿಧಿಯಲ್ಲಿ ಆಶ್ಲೇಷಾ ಬಲಿ, ತಂಬಿಲ, ದೈವಗಳಿಗೆ ತಂಬಿಲ, ಮಧ್ಯಾಹ್ನ ಮಹಾಪೂಜೆ, ಅನ್ನಸಂತರ್ಪಣೆ, ಸಂಜೆ ದೈವಗಳ ಭಂಡಾರ ತೆಗೆಯುವುದು, ಶ್ರೀ ದೇವರ ಬಲಿ ಹೊರಟು ಉತ್ಸವ, ವಸಂತ ಕಟ್ಟೆ ಪೂಜೆ, ಬೆಡಿಮದ್ದು ಪ್ರದರ್ಶನ, ದರ್ಶನ ಬಲಿ, ಬಟ್ಟಲು ಕಾಣಿಕೆ, ಉಳ್ಳಾಕುಲು, ರಕ್ತೇಶ್ವರಿ, ವ್ಯಾಘ್ರ ಚಾಮುಂಡಿ, ವರ್ಣಾರ ಪಂಜುರ್ಲಿ, ಬೊಟ್ಟಿಭೂತ, ಗುಳಿಗ ದೈವಗಳ ನೇಮ ನಡಾವಳಿ, ಮಾ. 9ರಂದು ಬೆಳಗ್ಗೆ ಕಲಶ ಆರಾಧನೆ, ಅನ್ನಸಂತರ್ಪಣೆ ನಡೆಯಿತು.