ಸುಬ್ರಹ್ಮಣ್ಯ : ಇತಿಹಾಸ ಪ್ರಸಿದ್ಧ ಕುಲ್ಕುಂದ ಶ್ರೀ ಬಸವೇಶ್ವರ ದೇಗುಲದಲ್ಲಿ ವಾರ್ಷಿಕ ಪ್ರತಿಷ್ಠಾ ಮಹೋತ್ಸವ ಸೋಮವಾರ ನಡೆಯಿತು.
ಪ್ರತಿಷ್ಠಾ ವಾರ್ಷಿಕೋತ್ಸವದ ಪ್ರಯುಕ್ತ ಮಧ್ಯಾಹ್ನ ಕಲಶಾಭಿಷೇಕ, ಶತರುದ್ರಾಭಿಷೇಕ, ಮಹಾಪೂಜೆ ಹಾಗೂ ಸಂಜೆ ರಂಗಪೂಜೆ ಸಹಿತ ವಿವಿಧ ಧಾರ್ಮಿಕ ಕಾರ್ಯಕ್ರಮಗಳು ಜರಗಿದವು. ದೇಗುಲದ ಜೀರ್ಣೋದ್ಧಾರ ಸಮಿತಿ ಅಧ್ಯಕ್ಷ ಮನೋಹರ ನಾಳ, ಪ್ರಧಾನ ಕಾರ್ಯದರ್ಶಿ ವಿಜಯಕುಮಾರ ನಡುತೋಟ, ಅಡಳಿತ ಸಮಿತಿ ಕಾರ್ಯದರ್ಶಿ ಶಿವರಾಮ ಪಳ್ಳಿಗದ್ದೆ ಹಾಗೂ ಸಮಿತಿ ಸದಸ್ಯರು, ಭಕ್ತರು ಉಪಸ್ಥಿತರಿದ್ದರು.