ಪರ್ಲಡ್ಕ ಮೇ 3: ಕುಂಜೂರು ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನದ ವಾರ್ಷಿಕ ಜಾತ್ರೆ ಮೇ 2ರಂದು ಜರಗಿತು. ಮೇ 2ರಂದು ಬೆಳಗ್ಗೆ ವೈದಿಕ ಕಾರ್ಯಕ್ರಮ, ಅನ್ನಸಂತರ್ಪಣೆ, ಸಂಜೆ ಭೂತ ಬಲಿ ಉತ್ಸವ, ವಸಂತ ಕಟ್ಟೆ ಪೂಜೆ, ಅಶ್ವತ್ಥ ಕಟ್ಟೆ ಪೂಜೆ, ಸುಡುಮದ್ದು ಪ್ರದರ್ಶನ ನಡೆಯಿತು.
ಸೌಪರ್ಣಿಕಾ ಬೆಡೇಕರ್ ಮತ್ತು ಅರ್ಪಿತಾ ಕಲ್ಲೂರಾಯ ಬಳಗದಿಂದ ಕರ್ನಾಟಕ ಶಾಸ್ತ್ರೀಯ ಸಂಗೀತ ಕಾರ್ಯಕ್ರಮ, ರಾತ್ರಿ ಬೊಳುವಾರು ಶ್ರೀ ಆಂಜನೇಯ ಮಹಿಳಾ ಯಕ್ಷಗಾನ ಸಂಘದಿಂದ ದಕ್ಷಯಜ್ಞ ಯಕ್ಷಗಾನ ತಾಳಮದ್ದಳೆ ಜರಗಿತು.