Home ಧಾರ್ಮಿಕ ಸುದ್ದಿ ಕುಂತೂರು: ಸಾರ್ವಜನಿಕ ಶ್ರೀ ಸತ್ಯನಾರಾಯಣ ಪೂಜೆ

ಕುಂತೂರು: ಸಾರ್ವಜನಿಕ ಶ್ರೀ ಸತ್ಯನಾರಾಯಣ ಪೂಜೆ

1907
0
SHARE

ಪೆರಾಬೆ : ಕುಂತೂರು-ಪೆರಾಬೆ ಹಿಂದೂ ಜಾಗರಣ ವೇದಿಕೆ ಹಾಗೂ ಗೆಳೆಯರ ಬಳಗದ ಸಹಯೋಗದಲ್ಲಿ ಕುಂತೂರು ಶ್ರೀ ಶಾರದಾ ಭಜನ ಮಂದಿರದಲ್ಲಿ ಸಾರ್ವಜನಿಕ ಶ್ರೀ ಸತ್ಯನಾರಾಯಣ ಪೂಜೆ ರವಿವಾರ ನಡೆಯಿತು.

ಅರ್ಬಿ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಪ್ರಧಾನ ಅರ್ಚಕ ಕೃಷ್ಣ ಪ್ರಸಾದ್‌ ಹಾಗೂ ಗುರುಪ್ರಸಾದ್‌ ನಿಡ್ವಣ್ಣಾಯ ಅವರ ನೇತೃತ್ವದಲ್ಲಿ ಪೂಜಾ ವಿಧಿ-ವಿಧಾನೊಂದಿಗೆ ಶ್ರೀ ಸತ್ಯನಾರಾಯಣ ಪೂಜೆ ನಡೆಯಿತು. ಪ್ರಸಾದ ವಿತರಣೆ, ಅನ್ನಸಂತರ್ಪಣೆ ನಡೆಯಿತು. ರಾತ್ರಿ ಕಲ್ಲಡ್ಕ ವಿಟuಲ ನಾಯಕ್‌ ಮತ್ತು ಬಳಗದವರಿಂದ ಗೀತಾ ಸಾಹಿತ್ಯ ಸಂಭ್ರಮ ಏರ್ಪಡಿಸಲಾಗಿತ್ತು. ಹಿಂದೂ ಜಾಗರಣ ವೇದಿಕೆ ತಾಲೂಕು ಕಾರ್ಯದರ್ಶಿ ರವೀಂದ್ರದಾಸ್‌ ಸ್ವಾಗತಿಸಿ, ವಂದಿಸಿದರು. ಕುಂತೂರು ಪದವು ಹಿಂದೂ ಜಾಗರಣ ವೇದಿಕೆ ಮತ್ತು ಗೆಳೆಯರ ಬಳಗದ ಪದಾಧಿಕಾರಿಗಳು ಸಹಕರಿಸಿದರು.

LEAVE A REPLY

Please enter your comment!
Please enter your name here