ಕುರ್ನಾಡು: ಸಾವಿರಾರು ವರ್ಷಗಳ ಇತಿಹಾಸವಿರುವ ಅಮ್ಮೆಂಬಳ ಮಾಗಣೆಯ ನಾಲ್ಕು ಗ್ರಾಮಗಳ ಆರಾಧ್ಯ ದೇವರಾದ ಕುರ್ನಾಡು ಶ್ರೀ ಸೋಮನಾಥೇಶ್ವರ ದೇವಸ್ಥಾನದ ಅಭಿವೃದ್ಧಿ ಕಾಮಗಾರಿಗಳು ಮತ್ತು ನವೀಕರಣ ಕಾರ್ಯ ಭರದಿಂದ ಸಾಗುತ್ತಿದ್ದು, ಮಾ. 27ರಿಂದ ಎ. 1ರ ವರೆಗೆ ನಡೆಯುವ ಅಷ್ಟಬಂಧ ಸಹಸ್ರಕುಂಭಾಭಿಷೇಕಕ್ಕೆ ಎಲ್ಲ ಭಕ್ತರ ಸಹಕಾರ ಅಗತ್ಯ ಎಂದು ದೇವಸ್ಥಾನದ ಜೀರ್ಣೋದ್ಧಾರ ಸಮಿತಿ ಅಧ್ಯಕ್ಷ ಜಯರಾಮ ಸಾಂತ ತಿಳಿಸಿದರು.
ಅಮ್ಮೆಂಬಳ ಕುರ್ನಾಡು ಶ್ರೀ ಸೋಮನಾಥೇಶ್ವರ ದೇವಸ್ಥಾನದಲ್ಲಿ ನಡೆದ ಕಾರ್ಯಕ್ರಮದಲ್ಲಿ ಮಾ. 27ರಿಂದ ಎ. 1ರ ವರೆಗೆ ನಡೆಯುವ ಶ್ರೀ ಕ್ಷೇತ್ರದ ಅಷ್ಟಬಂಧ ಸಹಸ್ರ ಕುಂಭಾಭಿಷೇಕದ ಆಮಂತ್ರಣ ಪತ್ರಿಕೆ ಬಿಡುಗಡೆ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿದರು.
ಕಾರ್ಯಕ್ರಮದಲ್ಲಿ ಕ್ಷೇತ್ರದ ಆಡಳಿತ ಮೊಕ್ತೇಸರ ಸುದರ್ಶನ ಶೆಟ್ಟಿ, ಜೀಣೊìàದ್ಧಾರ ಸಮಿತಿ ಗೌರವಾಧ್ಯಕ್ಷ ವೆಂಕಪ್ಪ ಕಾಜವ, ತಂತ್ರಿಗಳಾದ ರಘುರಾಮ ತಂತ್ರಿ, ಪ್ರಧಾನ ಅರ್ಚಕ ಹರಿ ಭಟ್, ಜಿರ್ಣೋದ್ಧಾರ ಸಮಿತಿ ಪ್ರಧಾನ ಕಾರ್ಯದರ್ಶಿ ಹರಿಪ್ರಸಾದ್ ರೈ ಬೆಳ್ಳಿಪಾಡಿ, ಬ್ರಹ್ಮಕಲಶೋತ್ಸವ ಸಮಿತಿ ಅಧ್ಯಕ್ಷ ಶಿವಶಂಕರ ಭಟ್ ಕಾಡಿಮಾರು, ಕಾರ್ಯಾಧ್ಯಕ್ಷ ರಾಜೇಶ್ ಶೆಟ್ಟಿ ಫಜೀರುಗುತ್ತು, ಪ್ರಧಾನ ಕಾರ್ಯದರ್ಶಿ ಕೆ.ಆರ್.ಗಟ್ಟಿ ಕೊರಂತೋಡಿ, ಮಹಿಳಾ ಸಮಿತಿ ಅಧ್ಯಕ್ಷೆ ಡಾ| ಸುರೇಖಾ ಅಮರನಾಥ ಶೆಟ್ಟಿ, ಆರ್ಥಿಕ ಸಮಿತಿ ಪ್ರಧಾನ ಸಂಚಾಲಕ ಗಣೇಶ ನಾಯ್ಕ ಕುರ್ನಾಡುಗುತ್ತು, ಗೌರವಾಧ್ಯಕ್ಷ ವೆಂಕಪ್ಪ ಕಾಜವ, ಉಪಾಧ್ಯಕ್ಷ ಪ್ರದೀಪ ಆಳ್ವ ಅಜೆಕಳಗುತ್ತು , ಕಾರ್ಯಾಧ್ಯಕ್ಷ ನರಸಿಂಹ ಹೆಗ್ಡೆ ಈ ಸಂದರ್ಭ ಉಪಸ್ಥಿತರಿದ್ದರು.