ಕುಂಬಳೆ : ಪೈವಳಿಕೆ ಪಂಚಾಯತ್ನ ಕುರುಡಪದವು ಶ್ರೀ ಅಯ್ಯಪ್ಪ ಭಜನ ಮಂದಿರದ ನೂತನ ಕಟ್ಟಡದ ಶಿಲಾನ್ಯಾಸ ಸಮಾರಂಭವು ಜೂ. 30ರಂದು ವೇದಮೂರ್ತಿ ಬೋಳಂತ ಕೋಡಿ ರಾಮ ಭಟ್ಟ ಅವರ ಪೌರೋಹಿತ್ಯದಲ್ಲಿ ಮಾಣಿಲ ಶ್ರೀಧಾಮದ ಶ್ರೀಮೋಹನದಾಸ ಪರಮಹಂಸ ಸ್ವಾಮೀಜಿ ಅವರು ನೆರವೇರಿಸಲಿರುವರು.
ಕಾರ್ಯಕ್ರಮದ ಅಂಗವಾಗಿ ಜೂ. 30ರಂದು ಬೆಳಗ್ಗೆ 7 ಗಂಟೆಗೆ ಗಣಪತಿ ಹವನ, 7.22ಕ್ಕೆ ವಾಸ್ತುಪೂಜೆಯ ಬಳಿಕ 8.30ಕ್ಕೆ ಶಿಲಾನ್ಯಾಸ ಜರಗಲಿದೆ. 9.30ರಿಂದ ಜರಗಲಿರುವ ಧಾರ್ಮಿಕ ಸಭೆಯ ಅಧ್ಯಕ್ಷತೆಯನ್ನು ಇಡಿಯಡ್ಕ ಕ್ಷೇತ್ರದ ಆಡಳಿತ ಸಮಿತಿ ಅಧ್ಯಕ್ಷ ಬಿ. ವಸಂತ ಪೈ ವಹಿಸಲಿರುವರು. ಮಂಗಲ್ಪಾಡಿ ಬಂಟರ ಸಂಘದ ಅಧ್ಯಕ್ಷ ಶ್ರೀಧರ ಶೆಟ್ಟಿ ಮುಟ್ಟ, ಶ್ರೀಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನಾಧಿಕಾರಿ ಚೇತನಾ ಎಂ., ಕಾಸರಗೋಡು ಸರಕಾರಿ ಕಾಲೇಜಿನ ನಿವೃತ್ತ ಪ್ರಾಂಶುಪಾಲ ಪ್ರೊ| ಎ. ಶ್ರೀನಾಥ್ ಅತಿಥಿಗಳಾಗಿ ಭಾಗವಹಿಸಲಿರುವರು.