Home Uncategorized 50ನೇ ವರ್ಷದ ಸಾರ್ವಜನಿಕ ಶ್ರೀ ಗಣೇಶೋತ್ಸವ

50ನೇ ವರ್ಷದ ಸಾರ್ವಜನಿಕ ಶ್ರೀ ಗಣೇಶೋತ್ಸವ

•ಶ್ರೀ ಮಂಗಳಾದೇವಿ ಸೇವಾ ಸಮಿತಿ

808
0
SHARE

ಮಹಾನಗರ: ಶ್ರೀ ಮಂಗಳಾದೇವಿ ಸೇವಾ ಸಮಿತಿಯ ಸಾರ್ವಜನಿಕ ಶ್ರೀ ಗಣೇಶೋತ್ಸವ ಈ ಬಾರಿ ಸುವರ್ಣ ಸಂಭ್ರಮದಲ್ಲಿದೆ.

1969ರಲ್ಲಿ ದಿ| ಬಿ. ನಾರಾ ಯಣ ಕರ್ಕೇರ ಅವರ ಅಧ್ಯಕ್ಷತೆಯಲ್ಲಿ ಶ್ರೀ ಮಂಗಳಾದೇವಿ ಸೇವಾ ಸಮಿತಿ ಪ್ರಾರಂಭಗೊಂಡು 49 ವರ್ಷಗಳಿಂದಲೂ ಶ್ರೀ ದೇವಿಯ ಎಲ್ಲ ಕಾರ್ಯಕ್ರಮಗಳಲ್ಲಿ ಸಕ್ರಿಯವಾಗಿ ಭಾಗವಹಿಸಿ ಸೇವೆಯನ್ನು ಮಾಡುತ್ತಿದೆ.

ಸೇವಾ ಸಮಿತಿಯ ಆಶ್ರಯದಲ್ಲಿ ಪ್ರತಿವರ್ಷ ಗಣೇಶ ಚತುರ್ಥಿಯನ್ನು ಅತೀ ದೊಡ್ಡ ಗಣೇಶ ವಿಗ್ರಹ ನಿರ್ಮಿಸುವ ಮೂಲಕ ವಿಜೃಂಭಣೆಯಿಂದ ಆಚರಿಸಲಾಗುತ್ತಿದೆ. ಸಾರ್ವಜನಿಕ ಗಣೇಶೋತ್ಸವ ಹಾಗೂ ದೀಪೋತ್ಸವಕ್ಕೆ ಕರ್ನಾಟಕದಲ್ಲಿಯೇ ಪ್ರಥಮವಾಗಿ ಭವ್ಯವಾದ ತಿರುಗುವ ಗುರ್ಜಿಯನ್ನು ರಚಿಸಿದ ಹೆಗ್ಗಳಿಕೆಗೆ ಸಮಿತಿ ಪಾತ್ರವಾಗಿದೆ. ಇದರೊಂದಿಗೆ ರಕ್ತದಾನ ಶಿಬಿರ, ಆರೋಗ್ಯ ತಪಾಸಣೆ, ಆಸ್ಪತ್ರೆ ವೆಚ್ಚ, ಬಡ ಮಕ್ಕಳಿಗೆ ಶೈಕ್ಷಣಿಕ ನೆರವು, ಸಾರ್ವಜನಿಕರಿಗಾಗಿ ಆಟೋಟ ಸ್ಪರ್ಧೆ, ಸತ್ಯನಾರಾಯಣ ಪೂಜೆ, ವಿವಿಧ ರಂಗಗಳಲ್ಲಿ ಸಾಧನೆಗೈದ ಹಲವರಿಗೆ ಸಮ್ಮಾನ ಸಹಿತ ಹಲವು ಸಮಾಜಮುಖೀ ಕಾರ್ಯಕ್ರಮಗಳನ್ನು ಆಯೋಜಿಸುತ್ತಾ ಬಂದಿದೆ. ಶ್ರೀ ಮಂಗಳಾದೇವಿ ದೇಗುಲದ ಪ್ರಾಂಗಣದಲ್ಲಿಯೇ 49 ವರ್ಷಗಳಿಂದ ನಡೆದುಕೊಂಡು ಬರುತ್ತಿರುವ ಗಣೇ ಶೋತ್ಸವಕ್ಕೆ ಲಕ್ಷಾಂತರ ಭಕ್ತರು ಆಗಮಿಸಿ ದರ್ಶನ ಪಡೆದುಕೊಳ್ಳುತ್ತಿದ್ದಾರೆ.

ಗಣೇಶೋತ್ಸವ ಮಾತ್ರವಲ್ಲದೆ ಇತರ ಹಬ್ಬ ಹರಿದಿನಗಳ ಅಂಗವಾಗಿ ಸಾರ್ವಜನಿಕರಿಗೆ ವಿವಿಧ ಸ್ಪರ್ಧೆಗಳನ್ನು ಆಯೋಜಿಸಿ ಜನರನ್ನು ಒಗ್ಗೂಡಿಸುವ ಕೆಲಸವನ್ನು ಸಮಿತಿ ಮಾಡುತ್ತಿದೆ.

18 ವರ್ಷಗಳ ಹಿಂದೆ ಶ್ರೀ ಮಂಗಳಾದೇವಿ ಸೇವಾ ಸಮಿತಿಯ ಮಹಿಳಾ ಘಟಕ ಅಸ್ತಿತ್ವಕ್ಕೆ ಬಂದಿತು. ಮಹಿಳಾ ಘಟಕದ ವತಿಯಿಂದಲೂ ಹಲವಾರು ಧಾರ್ಮಿಕ ಹಾಗೂ ಸಾಮಾಜಿಕ ಚಟುವಟಿಕೆಗಳನ್ನು ನಡೆಸಲಾಗುತ್ತಿದೆ. ಪ್ರತಿ ಶುಕ್ರವಾರ ಮಂಗಳಾದೇವಿ ದೇವಸ್ಥಾನದಲ್ಲಿ ಮಹಿಳಾ ಘಟಕದಿಂದ ಅನ್ನಸಂತರ್ಪಣೆ ಸಂದರ್ಭದಲ್ಲಿ ಸೇವೆಯನ್ನು ಮಾಡಲಾಗುತ್ತಿದೆ. ಶನಿವಾರ ಭಜನೆ ಸಹಿತ ಇನ್ನಿತರ ಚಟುವಟಿಕೆಗಳ ಮೂಲಕ ಸ್ಥಳೀಯರೊಂದಿಗೆ ಅನ್ಯೋನ್ಯ ಬಾಂಧವ್ಯವನ್ನು ಇರಿಸಿಕೊಂಡಿದೆ.

ಈ ಬಾರಿ ಸಮಿತಿ ಸುವರ್ಣ ಮಹೋತ್ಸವದ ಸವಿನೆನಪಿಗಾಗಿ ಸಾರ್ವಜನಿಕ ಗಣೇಶೋತ್ಸವವನ್ನು ಸೆ. 2ರಿಂದ ಸೆ. 7ರ ವರೆಗೆ ವಿವಿಧ ಸಾಮಾಜಿಕ, ಧಾರ್ಮಿಕ, ಸಾಂಸ್ಕೃತಿಕ ಕಾರ್ಯಕ್ರಮಗಳೊಂದಿಗೆ ಆಯೋಜಿಸಿದೆ. ಈ ಸಂದರ್ಭ ದೇವರಿಗೆ ಬೆಳ್ಳಿ ಸಿಂಹಾಸನವನ್ನು ಅರ್ಪಿಸಲಾಗುತ್ತದೆ.

LEAVE A REPLY

Please enter your comment!
Please enter your name here