ಗುತ್ತಿಗಾರು ನಾಲ್ಕೂರು ಗ್ರಾಮದ ಮರಕತ ಶ್ರೀ ದುರ್ಗಾ ಪರಮೇಶ್ವರಿ ದೇವಸ್ಥಾನದಲ್ಲಿ ಪ್ರತಿಷ್ಠಾ ವಾರ್ಷಿ ಕೋತ್ಸವವು ಎ. 23ರಂದು ನಡೆಯಿತು.
ದುರ್ಗಾಹವನ, ಉಗ್ರಾಣ ತುಂಬಿಸುವ ಕಾರ್ಯಕ್ರಮ, ನಡೆದು ಮಧ್ಯಾಹ್ನ ಮಹಾಪೂಜೆ ಪ್ರಸಾದ ವಿತರಣೆ ನಡೆಯಿತು.
ರಾತ್ರಿ ಮಹಾಪೂಜೆ ನಡೆದ ಬಳಿಕ ಶ್ರೀ ದೇವಿಯ ಬಲಿ ಹೊರಟು ಶ್ರೀ ಭೂತಬಲಿ ಉತ್ಸವ, ಕಟ್ಟೆ ಪೂಜೆ ನಡೆಯಿತು. ಎ. 24ರಂದು ದೇವರ ದರ್ಶನ ಬಲಿ, ಬಟ್ಟಲು ಕಾಣಿಕೆ, ಪ್ರಸಾದ ವಿತರಣೆ ಅನ್ನಸಂತರ್ಪಣೆ ನಡೆಯಿತು. ರಾತ್ರಿ ಕ್ರೇತ್ರಪಾಲಿನಿ ಚಾಮುಂಡಿ ಮತ್ತು ಪರಿವಾರ ದೈವಗಳ ಭಂಡಾರ ತೆಗೆದು ರುದ್ರ ಚಾಮುಂಡಿ, ವರ್ಣಾರ ಪಂಜುರ್ಲಿ, ಪುರುಷ ದೈವಗಳ ನೇಮ ನಡೆದು ಬಳಿಕ ಭೂಮಿ ಗುಳಿಗ, ರಾಹುಗುಳಿಗ, ಕುಪ್ಪೆ ಪಂಜುರ್ಲಿ ನೇಮ ನಡೆಯಿತು. ಕಾರ್ಯಕ್ರಮದಲ್ಲಿ ದೇವಸ್ಥಾನದ ಆಡಳಿತ ಮಂಡಳಿಯ ಸದಸ್ಯರುಗಳು ಹಾಗೂ ಭಕ್ತರು ಭಾಗವಹಿಸಿದ್ದರು