ವೇಣೂರು: ಮರೋಡಿ ಶ್ರೀ ಉಮಾಮಹೇಶ್ವರ ದೇವಸ್ಥಾನದಲ್ಲಿ ಶ್ರೀ ದೇವರಿಗೆ ಪಾಣಿಪೀಠ ಸಹಿತ ಬೆಳ್ಳಿಕವಚ ಸಮರ್ಪಣೆ ಕಾರ್ಯಕ್ರಮವು ಗುರುವಾರ ಜರಗಿತು.
ದೇವರ ಪ್ರತಿಷ್ಠಾ ಮಹೋತ್ಸವದ ಪ್ರಯುಕ್ತ ಚಂಡಿಕಾಯಾಗ, ರುದ್ರಯಾಗ, ಮಹಾಪೂಜೆ, ಪ್ರಸಾದ ವಿತರಣೆ, ಅನ್ನಸಂತರ್ಪಣೆ, ಸಂಜೆ ರಂಗಪೂಜೆ ನೆರವೇರಿತು.
ದೇವಸ್ಥಾನದ ಆಡಳಿತ ಮೊಕ್ತೇಸರ ದೇವೇಂದ್ರ ಹೆಗ್ಡೆ ಕೊಕ್ರಾಡಿ, ಕಾರ್ಯದರ್ಶಿ ಜಯಂತ್ ಕೋಟ್ಯಾನ್, ಜೀರ್ಣೋದ್ಧಾರ ಸಮಿತಿ ಮುಂಬೈ ಘಟಕದ ಅಧ್ಯಕ್ಷ ನಾರಾಯಣ ಸುವರ್ಣ, ಆಡಳಿತ ಮಂಡಳಿ ಸದಸ್ಯರು, ಮರೋಡಿ, ಸಾವ್ಯ, ಕುತ್ಲೂರು ಹಾಗೂ ಕೊಕ್ರಾಡಿ ಗ್ರಾಮಸ್ಥರು ಉಪಸ್ಥಿತರಿದ್ದರು. ಬೆಂಗಳೂರಿನ ಉದ್ಯಮಿ ಸುರೇಶ್ ಗೀತಾ ದಂಪತಿ ಅವರು ಶ್ರೀ ದೇವರ ಪಾಣಿಪೀಠ ಸಹಿತ ಬೆಳ್ಳಿಕವಚವನ್ನು ದಾನವಾಗಿ ನೀಡಿದ್ದಾರೆ.
ದೇವಸ್ಥಾನದ ಪ್ರಧಾನ ಅರ್ಚಕ ಸುಬ್ರಹ್ಮಣ್ಯ ಪ್ರಸಾದ್ ಅವರು ಪೂಜಾ ವಿಧಿ ವಿಧಾನ ನೆರವೇರಿಸಿದರು.