Home ಧಾರ್ಮಿಕ ಸುದ್ದಿ ಮರೋಳಿ : ಪ್ರತಿಷ್ಠಾ ಬ್ರಹ್ಮಕಲಶೋತ್ಸವದ ವಾರ್ಷಿಕ ದಿನಾಚರಣೆ

ಮರೋಳಿ : ಪ್ರತಿಷ್ಠಾ ಬ್ರಹ್ಮಕಲಶೋತ್ಸವದ ವಾರ್ಷಿಕ ದಿನಾಚರಣೆ

1584
0
SHARE

ಮಹಾನಗರ, : ಇತಿಹಾಸ ಪ್ರಸಿದ್ಧ ಮರೋಳಿ ಶ್ರೀ ಸೂರ್ಯ ನಾರಾಯಣ ದೇವಸ್ಥಾನದಲ್ಲಿ ಪ್ರತಿಷ್ಠಾ ಬ್ರಹ್ಮಕಲಶೋತ್ಸವದ ವಾರ್ಷಿಕ ದಿನವನ್ನು ಪ್ರತಿಷ್ಠಾ ದಿನಾಚರಣೆಯಾಗಿ ವೈದಿಕ ವಿಧಿ ವಿಧಾನಗಳೊಂದಿಗೆ ಶ್ರೀ ಕ್ಷೇತ್ರ ತಂತ್ರಿಗಳ ಮಾರ್ಗದರ್ಶನದಲ್ಲಿ ಆಚರಿಸಲಾಯಿತು.

ಬೆಳಗ್ಗೆ ಉಷಾಃಪೂಜೆ ಜರಗಿ ಸಾಮೂಹಿಕ ಪ್ರಾರ್ಥನೆ, ಗಣಪತಿ ಹವನ ಮತ್ತು ನವ ಕಲಶಾಭಿಷೇಕ ಜರಗಿ ಮಧಾಹ್ನ ಮಹಾಪೂಜೆ, ಅನ್ನಸಂತರ್ಪಣೆ, ರಾತ್ರಿ ದುರ್ಗಾ ನಮಸ್ಕಾರ ಪೂಜೆ, ಕಿರು ರಂಗ ಪೂಜೆ ನೆರವೇರಿತು. ಧಾರ್ಮಿಕ ಮುಖಂಡರು, ಜೀರ್ಣೋದ್ಧಾರ ಸಮಿತಿ, ಗ್ರಾಮಸಮಿತಿ ಮತ್ತು ಆಡಳಿತ ಮಂಡಳಿ ಸದಸ್ಯರು ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here