ಕೊಕ್ಕಡ : ಕೊಕ್ಕಡದ ಶ್ರೀ ವೈದ್ಯನಾಥೇಶ್ವರ ವಿಷ್ಣುಮೂರ್ತಿ ದೇವಸ್ಥಾನಕ್ಕೆ ಸಂಬಂಧಿಸಿದ ಮಾಯಿಲ ಕೋಟೆಯ ದೈವಗಳ ಸಾನ್ನಿಧ್ಯವನ್ನು ಪುನರ್ ನಿರ್ಮಾಣಗೊಳಿಸುವ ಕುರಿತಂತೆ ಅಷ್ಟಮಂಗಲ ಪ್ರಶ್ನೆ ಚಿಂತನೆ ನಡೆದಿದ್ದು, ದೈವಗಳ ಸನ್ನಿಧಿಯ ಜೀರ್ಣೋದ್ಧಾರ ಕಾರ್ಯಕ್ಕಾಗಿ ನೂತನ ಜೀರ್ಣೋದ್ಧಾರ ಸಮಿತಿಯನ್ನು ರಚನೆ ಮಾಡುವ ಸಲುವಾಗಿ ಭಕ್ತರ ಮಹಾಸಭೆ ಡಿ. 15 ರಂದು ನಡೆಯಿತು.
ಶ್ರೀಧಾಮ ಮಾಣಿಲದ ಶ್ರೀ ಮೋಹನದಾಸ ಪರಮಹಂಸ ಸ್ವಾಮೀಜಿ ಆಶೀರ್ವಚನ ನೀಡಿದರು. ನೂತನ ಜೀರ್ಣೋದ್ಧಾರ ಸಮಿತಿಯ ಅಧ್ಯಕ್ಷರಾಗಿ ಆಯ್ಕೆಯಾದ ರಾಮಕೃಷ್ಣ ದೇವಾಡಿಗ, ಜಯರಾಮ ಗೌಡ ಪುತ್ಯೆ, ಕೊಕ್ಕಡ ಶ್ರೀ ವೈದ್ಯನಾಥೇಶ್ವರ ದೇವಸ್ಥಾನದ ವ್ಯವಸ್ಥಾಪನ ಸಮಿತಿ ಅಧ್ಯಕ್ಷ ವಸಂತ ರಾವ್, ಪವಿತ್ರಪಾಣಿ ರಾಧಾಕೃಷ್ಣ ಯಡಪ್ಪಾಡಿತ್ತಾಯ, ಪುತ್ಯೆ ಶ್ರೀ ವಿಷ್ಣುಮೂರ್ತಿ ದೇವಸ್ಥಾನದ ವ್ಯವಸ್ಥಾಪನ ಸಮಿತಿ ಅಧ್ಯಕ್ಷ ಜಯರಾಮ ಗೌಡ ಹಾರ ಉಪಸ್ಥಿತರಿದ್ದರು.
ಕ್ಷೇತ್ರದ ಜೀರ್ಣೋದ್ಧಾರ ಕಾರ್ಯದ ನಿಮಿತ್ತ ಜೀರ್ಣೋದ್ಧಾರ ಸಮಿತಿ, ಮಹಿಳಾ ಸಮಿತಿ, ಬೈಲುವಾರು ಸಮಿತಿಗಳನ್ನು ರಚಿಸಲಾಯಿತು. ತಾ.ಪಂ. ಸದಸ್ಯ ಲಕ್ಷ್ಮೀನಾರಾಯಣ ಸ್ವಾಗತಿಸಿದರು. ರುಕ್ಮಯ ಮಡಿವಾಳ ವಂದಿಸಿದರು.