ನರಿಮೊಗರು : ಇಲ್ಲಿನ ಶ್ರೀ ಮೃತ್ಯುಂಜಯೇಶ್ವರ ದೇವಸ್ಥಾನದಲ್ಲಿ ವರ್ಷಾವಧಿ ಜಾತ್ರೆ ಆರಂಭಗೊಂಡು ಬ್ರಹ್ಮಶ್ರೀ ಕೆಮ್ಮಿಂಜೆ ನಾಗೇಶ ತಂತ್ರಿ ಅವರ ನೇತೃತ್ವದಲ್ಲಿ ವಿವಿಧ ಧಾರ್ಮಿಕ ಕಾರ್ಯ ಕ್ರಮಗಳು ನಡೆದವು.
ಗುರುವಾರ ಬೆಳಗ್ಗೆ ದೇವತಾ ಪ್ರಾರ್ಥನೆ, ಆಚಾರ್ಯವರಣ, ಸ್ವಸ್ತಿ ಪುಣ್ಯಾಹವಾಚನ, ಶ್ರೀ ಮಹಾ ಗಣಪತಿ ಹೋಮ, ವೇ| ಮೂ| ಶ್ರೀವತ್ಸ ಕೆದಿಲಾಯ ಶಿಬರ ಅವರ ಪೌರೋಹಿತ್ಯದಲ್ಲಿ ಸಾರ್ವಜನಿಕ ಶ್ರೀ ಮಹಾಮೃತ್ಯುಂಜಯ ಹೋಮ, ಮಧ್ಯಾಹ್ನ ಮಹಾಪೂಜೆ, ಪ್ರಸಾದ ವಿತರಣೆಯ ಬಳಿಕ ಅನ್ನಸಂತರ್ಪಣೆ ನಡೆಯಿತು. ರಾತ್ರಿ ಮಹಾಪೂಜೆ, ಶ್ರೀ ದೇವರ ಬಲಿ ಹೊರಟು ಉತ್ಸವ, ಸುಡುಮದ್ದು ಪ್ರದರ್ಶನ, ವಸಂತಕಟ್ಟೆ ಪೂಜೆ, ಅನ್ನಸಂತರ್ಪಣೆ ನಡೆಯಿತು.
ಶುಕ್ರವಾರ ಬೆಳಗ್ಗೆ ಶ್ರೀ ಮಹಾಗಣಪತಿ ಹೋಮ, ಕಲಶ ಪೂಜೆ, ದೇವರ ಬಲಿ ಹೊರಟು ಉತ್ಸವ, ದರ್ಶನ ಬಲಿ, ಬಟ್ಟಲು ಕಾಣಿಕೆ, ಪ್ರಸಾದ ವಿತರಣೆ, ಅನಂತರ ದೈವದ ನೇಮ, ಮಧ್ಯಾಹ್ನ ಶ್ರೀ ದೇವರಿಗೆ ಕಲಶಾಭಿಷೇಕ, ಮಹಾಪೂಜೆ, ವೈದಿಕ ಮಂತ್ರಾಕ್ಷತೆ, ಪ್ರಸಾದ ವಿತರಣೆಯ ಬಳಿಕ ಅನ್ನಸಂತರ್ಪಣೆ ನಡೆಯಿತು.
ವ್ಯವಸ್ಥಾಪನ ಸಮಿತಿ ಅಧ್ಯಕ್ಷ ಬಿ. ಟಿ. ಮಹೇಶ್ಚಂದ್ರ ಸಾಲ್ಯಾನ್, ಸದಸ್ಯರಾದ ಜಯಾನಂದ ಆಳ್ವ, ಜನಾರ್ದನ ಜೋಯಿಸ ಕುತ್ತಿಗದ್ದೆ, ಸೀತಾರಾಮ ಗೌಡ ಮುಂಡತ್ತೋಡಿ, ಶಕುಂತಳಾ ಎನ್. ಪೂಜಾರಿ, ಗಣೇಶ್ ನಾಯ್ಕ ಕೋಡಿಬೈಲು, ಪ್ರಕಾಶ್ ಪುರುಷರಕಟ್ಟೆ, ಜಾತ್ರೆಸಮಿತಿಯ ಅಧ್ಯಕ್ಷ ಕೆ. ಸುಂದರ ಗೌಡ ನಡುಬೈಲು, ಸಮಿತಿ ಪದಾಧಿಕಾರಿಗಳು, ನೂರಾರು ಮಂದಿ ಭಕ್ತರು ಪಾಲ್ಗೊಂಡರು.