ಸವಣೂರು : ಹುತ್ತಕ್ಕೆ ಪೂಜೆ ಸಲ್ಲುವ ಕಾರಣಿಕ ಹಾಗೂ ಸಿದ್ಧಿ ಕ್ಷೇತ್ರ ಕೊಳ್ತಿಗೆ ಗ್ರಾಮದ ನಳೀಲು ಶ್ರೀ ಸುಬ್ರಹ್ಮಣ್ಯ ದೇಗುಲದ ಜಾತ್ರೆ ಹಾಗೂ ಸಾಮೂಹಿಕ ಶ್ರೀ ಸತ್ಯನಾರಾಯಣ ಪೂಜೆ ಬ್ರಹ್ಮಶ್ರೀ ನಾಗೇಶ್ ತಂತ್ರಿಗಳ ನೇತೃತ್ವದಲ್ಲಿ ಫೆ. 23, 24ರಂದು ನಡೆಯಲಿದ್ದು, ಇದರ ಪೂರ್ವಭಾವಿಯಾಗಿ ಹಸುರುವಾಣಿ ಸಮರ್ಪಣೆ ಫೆ. 22ರಂದು ನಡೆಯಿತು.
ಅರ್ಚಕ ಹರಿನಾರಾಯಣ ಮನೋಳಿತ್ತಾಯ ಧಾರ್ಮಿಕ ವಿಧಿವಿಧಾನ ನೆರವೇರಿಸಿದರು. ದೇವಸ್ಥಾನದ ಆಡಳಿತ ಮೊಕ್ತೇಸರ ಸಂತೋಷ್ ಕುಮಾರ್ ರೈ ನಳೀಲು, ಮೊಕ್ತೇಸರ ಮೋಹನ್ದಾಸ್ ರೈ ಎನ್., ಸತೀಶ್ ರೈ, ಅರುಣ್ ಕುಮಾರ್ ರೈ, ಪ್ರವೀಣ್ ಕುಮಾರ್, ಪಾಲ್ತಾಡು ವಿಷ್ಣುಮೂರ್ತಿ ದೈವಸ್ಥಾನದ ಆಡಳಿತ ಮೊಕ್ತೇಸರ ನವೀನ್ ರೈ ನಡುಮನೆ ಮತ್ತಿತರರು ಉಪಸ್ಥಿತರಿದ್ದರು.
ಇಂದು ಸತ್ಯನಾರಾಯಣ ಪೂಜೆ ಫೆ. 23ರ ಬೆಳಗ್ಗೆ ದೇವತಾ ಪ್ರಾರ್ಥನೆ, ಮಹಾಗಣಪತಿ ಹೋಮ, ಕಲಶ ಪೂಜೆ, ಸಾಮೂಹಿಕ ಶ್ರೀ ಸತ್ಯನಾರಾಯಣ ಪೂಜೆಯ ಬಳಿಕ ಕಲಶಾಭಿಷೇಕ, ಮಹಾಪೂಜೆ, ಪ್ರಸಾದ ವಿತರಣೆ, ಅನ್ನಸಂತರ್ಪಣೆ ನಡೆಯಲಿದೆ. ರಾತ್ರಿ ದೈವಗಳ ಭಂಡಾರ ತೆಗೆದ ಬಳಿಕ ವಲ್ಮೀಕ ರೂಪಿ ಸುಬ್ರಹ್ಮಣ್ಯ ದೇವರಿಗೆ ರಂಗಪೂಜೆ ನಡೆಯಲಿದೆ.ಬಳಿಕ ಸಾರ್ವಜನಿಕ ಅನ್ನಸಂತರ್ಪಣೆ ನಡೆಯಲಿದೆ.
ನಾಳೆ ನೇಮ
ಫೆ. 24ರಂದು ಪ್ರಾತಃ ಕಾಲ ವ್ಯಾಘ್ರ ಚಾಮುಂಡಿಯ ನೇಮ. ಬೆಳಗ್ಗೆ ರುದ್ರ ಚಾಮುಂಡಿಯ ನೇಮ, ಗುಳಿಗ ದೈವಕ್ಕೆ ತಂಬಿಲ ಸೇವೆ ನಡೆಯಲಿದೆ.