ನೆಲ್ಲಿಕಟ್ಟೆ : ಇಲ್ಲಿನ ಖಾಸಗಿ ಬಸ್ ನಿಲ್ದಾಣದ ಬಳಿಯ ನಾಗದೇವರ ಸನ್ನಿಧಿಯಲ್ಲಿ 16ನೇ ವಾರ್ಷಿಕ ಮಹಾಪೂಜೆ ಬ್ರಹ್ಮಶ್ರೀ ಕೇಶವ ಜೋಗಿತ್ತಾಯ ಅವರ ನೇತೃತ್ವದಲ್ಲಿ ನಡೆಯಿತು.
ಬೆಳಗ್ಗೆ ನಾಗತಂಬಿಲ, ಆಶ್ಲೇಷಾ ಬಲಿ, ಮಹಾಪೂಜೆ, ಮಧ್ಯಾಹ್ನ ಸಾರ್ವಜನಿಕ ಅನ್ನಸಂತರ್ಪಣೆ ನಡೆಯಿತು. ಮಾಜಿ ಶಾಸಕಿ ಶಕುಂತಳಾ ಟಿ. ಶೆಟ್ಟಿ, ಸಮಿತಿಯ ಅಧ್ಯಕ್ಷ ಡಾ| ಪಿ.ಕೆ. ಗಣೇಶ್ ನೆಲ್ಲಿಕಟ್ಟೆ, ಮುರಳೀಕೃಷ್ಣ ಹಸಂತಡ್ಕ, ನಗರಸಭಾ ಮಾಜಿ ಅಧ್ಯಕ್ಷ ನೆಲ್ಲಿಕಟ್ಟೆ ಜಗದೀಶ್ ಶೆಟ್ಟಿ, ನ್ಯಾಯವಾದಿ ಹರಿಣಾಕ್ಷಿ ಜೆ. ಶೆಟ್ಟಿ, ನಗರಸಭಾ ಸದಸ್ಯ ಪ್ರೇಮಾನಾಥ್
ಸೂತ್ರಬೆಟ್ಟು, ಮಾಜಿ ನಗರಸಭಾ ಸದಸ್ಯ ಚಂದ್ರಸಿಂಗ್, ಕಾಂಗ್ರೆಸ್ ಸೇವಾದಳದ ಅಧ್ಯಕ್ಷ ಜೋಕಿಂ ಡಿ’ಸೋಜಾ, ಕೋಟಿ ಚೆನ್ನಯ ಕಂಬಳ ಸಮಿತಿ ಅಧ್ಯಕ್ಷ ಎನ್. ಚಂದ್ರಹಾಸ ಶೆಟ್ಟಿ, ಇಂಟಕ್ ಕಾರ್ಯದರ್ಶಿ ಪ್ರಸನ್ನ ಕುಮಾರ್ ಶೆಟ್ಟಿ, ಶಿವರಾಮ ಆಳ್ವ ಕುರಿಯ, ಪುರಸಭಾ ಮಾಜಿ ಅಧ್ಯಕ್ಷ ಗಣೇಶ್ ರಾವ್, ಮಲ್ಲಿಕಾ ಗಣೇಶ್, ಮಹಾಲಿಂಗೇಶ್ವರ ದೇವಸ್ಥಾನದ
ವ್ಯವಸ್ಥಾಪನ ಸಮಿತಿಯ ಸದಸ್ಯರಾದ ಯು.ಪಿ. ರಾಮಕೃಷ್ಣ, ನಯನ ರೈ ಪಾಲ್ಗೊಂಡರು.