ಪರ್ಲಡ್ಕ : ಇಲ್ಲಿನ ಪಾಂಗಳಾಯಿ ಶ್ರೀ ಅರಸು ಮುಂಡ್ಯತ್ತಾಯ ದೈವಸ್ಥಾನದಲ್ಲಿ ಶನಿವಾರ ಪ್ರತಿಷ್ಠಾ ಮಹೋತ್ಸವ,ರಾತ್ರಿ ದೈವಗಳ ವರ್ಷಾವಧಿ ನೇಮ ನಡೆಯಿತು.
ನೇಮದ ಪೂರ್ವಭಾವಿಯಾಗಿ ಶನಿವಾರ ಬೆಳಗ್ಗೆ ಬ್ರಹ್ಮಶ್ರೀ ಕೆಮ್ಮಿಂಜೆ ಲಕ್ಷ್ಮೀಶ ತಂತ್ರಿ ಅವರ ನೇತೃತ್ವದಲ್ಲಿ ಗಣಪತಿ ಹೋಮ, ನಾಗತಂಬಿಲ, ಪಂಚಾಮೃತಾಭಿಷೇಕ, ದೈವಗಳಿಗೆ ಕಲಶ ತಂಬಿಲ ಸೇವೆ, ಸಾಮೂಹಿಕ ಆಶ್ಲೇಷಾ ಬಲಿ, ಸಾಮೂಹಿಕ ಸತ್ಯನಾರಾಯಣ ಪೂಜೆ, ದೈವಗಳ ಪ್ರತಿಷ್ಠಾ ಮಹೋತ್ಸವದ ಅಂಗವಾಗಿ ಮಹಾಪೂಜೆ ನಡೆಯಿತು.
ಸಂಜೆ ದೈವಗಳ ಭಂಡಾರ ತೆಗೆದು, ಶ್ರೀ ಅರಸು ಮುಂಡ್ಯತ್ತಾಯ ದೈವಗಳ ನೇಮ, ಬಳಿಕ ಕಲ್ಲುರ್ಟಿ ಮತ್ತು ಪಂಜುರ್ಲಿ ಹಾಗೂ ಪರಿವಾರ ದೈವಗಳ ನೇಮ ನಡೆಯಿತು.
ದೈವಸ್ಥಾನದ ವ್ಯವಸ್ಥಾಪನ ಸಮಿತಿ, ಉತ್ಸವ ಸಮಿತಿಯ ಪದಾಧಿಕಾರಿಗಳು, ಧಾರ್ಮಿಕ, ರಾಜಕೀಯ ಮುಖಂಡರು, ಭಕ್ತರು ಪಾಲ್ಗೊಂಡರು.