ಮಹಾನಗರ: ಪಂಜಿಮೊಗರು ಉರುಂದಾಡಿ ಶ್ರೀ ಗೋಪಾಲಕೃಷ್ಣ ಭಜನ ಮಂಡಳಿಯಲ್ಲಿ ಶ್ರೀಕೃಷ್ಣ ಜನ್ಮಾಷ್ಟಮಿ ಆಚರಣೆ ವಿವಿಧ ಧಾರ್ಮಿಕ ಕಾರ್ಯಕ್ರಮಗಳೊಂದಿಗೆ ನೆರವೇರಿತು.
ಧಾರ್ಮಿಕ ಸಭಾ ಕಾರ್ಯಕ್ರಮವನ್ನು ಕೂಳೂರು ಶ್ರೀಕೃಷ್ಣ ಶಿಪ್ಪಿಂಗ್ ಕಾರ್ಪೊರೇಶನ್ ನಿರ್ದೇಶಕ ಅನಿಲ್ ಕುಮಾರ್ ಮತ್ತು ವತ್ಸಲಾ ಅನಿಲ್ ಕುಮಾರ್ ಉದ್ಘಾಟಿಸಿದರು. ಉದ್ಯಮಿ ಪಿ.ಸಿ. ಸುಕುಮಾರ್ ಪಂಜಿಮೊಗರು, ಕಾರ್ಪೊರೇಟರ್ ದಯಾನಂದ ಶೆಟ್ಟಿ, ಶ್ರೀ ಗೋಪಾಲಕೃಷ್ಣ ಭಜನ ಮಂಡಳಿ ಅಧ್ಯಕ್ಷ ಅಜಿತ್ ಕುಮಾರ್, ನಿಕಟಪೂರ್ವ ಅಧ್ಯಕ್ಷ ಗಿರಿಧರ್ ಸನಿಲ್, ಉಪಾಧ್ಯಕ್ಷ ಬೂಬ ಪೂಜಾರಿ, ಪ್ರಧಾನ ಕಾರ್ಯದರ್ಶಿ ಶೀನಪ್ಪ ಶೆಟ್ಟಿ, ಸಲಹೆಗಾರ ವೀರಪ್ಪ ಎಸ್. ಪೂಜಾರಿ, ಮಂಡಳಿ ಸದಸ್ಯರು ಉಪಸ್ಥಿತರಿದ್ದರು.
ಈ ಸಂದರ್ಭ ಶ್ರೀಕೃಷ್ಣ ಜನ್ಮಾಷ್ಟಮಿ ಪ್ರಯುಕ್ತ ಆಯೋಜಿಸಲಾದ ಆಟೋಟ ಸ್ಪರ್ಧೆಗಳ ವಿಜೇತರಿಗೆ ಬಹುಮಾನ ವಿತರಿಸಲಾಯಿತು. ಸುಂದರ್ ಅಂಚನ್ ಕಾರ್ಯಕ್ರಮ ನಿರೂಪಿಸಿದರು.
ಜನ್ಮಾಷ್ಟಮಿ ಅಂಗವಾಗಿ ರವಿವಾರ ಸಂಜೆ 33ನೇ ವಾರ್ಷಿಕ ಭಜನೆ ಆರಂಭಗೊಂಡು ರಾತ್ರಿ 12 ಗಂಟೆಗೆ ಭಜನ ಮಂಗಳ್ಳೋತ್ಸವ ನೆರವೇರಿತು. 8 ಭಜನ ತಂಡಗಳು
ಭಾಗವಹಿಸಿದ್ದವು. ಬಳಿಕ ಶ್ರೀದೇವರಿಗೆ ಮಹಾಪೂಜೆ ಜರಗಿತು.