Home ಧಾರ್ಮಿಕ ಸುದ್ದಿ ಪರ್ಪುಂಜ ರಾಮಜಾಲು ಗರಡಿ: ನಾಳೆ ಬ್ರಹ್ಮಬೈದೆರ್ಕಳ ನೇಮ

ಪರ್ಪುಂಜ ರಾಮಜಾಲು ಗರಡಿ: ನಾಳೆ ಬ್ರಹ್ಮಬೈದೆರ್ಕಳ ನೇಮ

1153
0
SHARE

ಬಡಗನ್ನೂರು : ತುಳುನಾಡಿನ ಕಾರಣಿಕ ಪುರುಷರಾದ ಕೋಟಿ ಚೆನ್ನಯರ ಗರಡಿಯಾಗಿರುವ ಒಳಮೊಗ್ರು ಗ್ರಾಮದ ಪರ್ಪುಂಜ ರಾಮಜಾಲು ಗರಡಿಯಲ್ಲಿ ಫೆ. 9ರಂದು ವೈಭವದ ಶ್ರೀ ಬ್ರಹ್ಮಬೈದೆರ್ಕಳ ನೇಮ ನಡೆಯಲಿದೆ. ಬೆಳಗ್ಗೆ ಗಣಪತಿ ಹೋಮ, ನಾಗದೇವರ ತಂಬಿಲ, ಬ್ರಹ್ಮ ದೇವರ ತಂಬಿಲ, ಕೋಟಿ ಚೆನ್ನಯರಿಗೆ ಕಲಶಾಭಿಷೇಕ ಹಾಗೂ ತಂಬಿಲ ಸೇವೆ ನಡೆದು ಮಹಾಪೂಜೆ, ಪ್ರಸಾದ ವಿತರಣೆ, ಬಳಿಕ ಅನ್ನಸಂತರ್ಪಣೆ ನಡೆಯಲಿದೆ. ಸಂಜೆ ಭಂಡಾರ ತೆಗೆದು, ಸಭಾ ಕಾರ್ಯಕ್ರಮ ನಡೆಯಲಿದೆ. ಭಕ್ತರಿಗೆ ಅನ್ನಸಂತರ್ಪಣೆ ಬಳಿಕ ಬೈದೇರುಗಳ ಗರಡಿ ಇಳಿಯುವ ಕಾರ್ಯಕ್ರಮ ನಡೆಯಲಿದ್ದು, ಸುಡುಮದ್ದು ಪ್ರದರ್ಶನವಿದೆ. ಬೈದೇರುಗಳ ಮೀಸೆ ಧರಿಸುವ ಕಾರ್ಯಕ್ರಮದ ಬಳಿಕ ಸಾಂಸ್ಕೃತಿಕ ಕಾರ್ಯಕ್ರಮ ಜರಗಲಿದೆ. ಬಳಿಕ ಮಾಯಂದಾಲೆ ಗರಡಿ ಇಳಿಯುವುದು, ಕೋಟಿ ಚೆನ್ನಯ ದರ್ಶನ ಪಾತ್ರಿಗಳ ಸೇಟ್, ಬೈದೆರುಗಳ ಸೇಟ್ ಬಳಿಕ ಪ್ರಸಾದ ವಿತರಣೆ ನಡೆಯಲಿದೆ.

ಧಾರ್ಮಿಕ ಸಭೆ

ಗರಡಿಯ ಪುನರ್‌ ಪ್ರತಿಷ್ಠಾ ಏಕಾದಶ ಸಂಭ್ರಮದ ಅಂಗವಾಗಿ ಕೂರೇಲುಗುತ್ತು ಶ್ರೀ ಸುಬ್ಬಪ್ಪ ಪೂಜಾರಿ ಧರ್ಮಚಾವಡಿ ಶ್ರೀ ದೇಯಿ ಬೈದೆತಿ ಸಿರಿದೊಂಪ ಚಾವಡಿಯಲ್ಲಿ ರಾತ್ರಿ 7.30ರಿಂದ ಧಾರ್ಮಿಕ ಸಭಾ ಕಾರ್ಯಕ್ರಮ ನಡೆಯಲಿದೆ. ವಿಧಾನ ಪರಿಷತ್‌ ವಿಪಕ್ಷ ನಾಯಕ ಕೋಟ ಶ್ರೀನಿವಾಸ ಪೂಜಾರಿ ಉದ್ಘಾಟಿಸಲಿದ್ದು, ಬಾಳೆಕೋಡಿ ಶ್ರೀ ಶಿಲಾಂಜನ ಕ್ಷೇತ್ರದ ಶ್ರೀ ಡಾ| ಶಶಿಕಾಂತ ಮಣಿ ಸ್ವಾಮೀಜಿ ಆಶೀರ್ವಚನ ನೀಡಲಿದ್ದಾರೆ. ರಾಮಜಾಲು ಗರಡಿ ಆಡಳಿತ ಮೊಕ್ತೇಸರ ಕೆ. ಸಂಜೀವ ಪೂಜಾರಿ ಕೂರೇಲು ಸಭಾಧ್ಯಕ್ಷತೆ ವಹಿಸಲಿದ್ದು, ಮಂಗಳೂರು ಆಕಾಶವಾಣಿ ಕಾರ್ಯಕ್ರಮ ನಿರ್ವಹಣಾಧಿಕಾರಿ ಡಾ| ಸದಾನಂದ ಪೆರ್ಲ ಧಾರ್ಮಿಕ ಉಪನ್ಯಾಸ ನೀಡಲಿದ್ದಾರೆ. ಶಾಸಕ ಮಠಂದೂರು, ಯುವವಾಹಿನಿ ಕೇಂದ್ರ ಸಮಿತಿ ಅಧ್ಯಕ್ಷ ಜಯಂತ ನಡುಬೈಲು ಭಾಗವಹಿಸಲಿದ್ದಾರೆ. ವಿವಿಧ ಕ್ಷೇತ್ರಗಳ 8 ಸಾಧಕರನ್ನು ಪುತ್ತೂರು ಸಹಾಯಕ ಆಯುಕ್ತ ಡಾ| ಕೃಷ್ಣಮೂರ್ತಿ ಅವರು ಸಮ್ಮಾನಿಸಲಿದ್ದಾರೆ.

LEAVE A REPLY

Please enter your comment!
Please enter your name here