ಬೆಳ್ತಂಗಡಿ: ಪೆರಿಂಜೆಯ ಶ್ರೀ ಕ್ಷೇತ್ರ ಪಡ್ಡ್ಯಾರಬೆಟ್ಟ ಶ್ರೀ ಕೊಡಮಣಿತ್ತಾಯ ಮೂಲ ದೈವಸ್ಥಾನದಲ್ಲಿ ಮಾರೂರು ಖಂಡಿಗ ರಾಮದಾಸ ಅಸ್ರಣ್ಣರ ನೇತೃತ್ವ ದಲ್ಲಿ ವರ್ಷಾವಧಿ ಜಾತ್ರೋತ್ಸವ ನಡೆಯುತ್ತಿದ್ದು, ರವಿವಾರ ರಾತ್ರಿ ಶ್ರೀ ಕೊಡಮಣಿತ್ತಾಯ ದೈವದ ನೇಮ ನಡೆಯಿತು.
ನೇಮದ ಬಳಿಕ ಭಕ್ತರಿಗೆ ಪ್ರಸಾದ ವಿತರಣೆ ನಡೆಯಿತು. ಸೋಮವಾರ ಬೆಳಗ್ಗೆ ಧ್ವಜ ಅವರೋಹಣ, ಸಂಪ್ರೋಕ್ಷಣೆ ನಡೆದು ಜಾತ್ರೆ ಸಂಪನ್ನಗೊಂಡಿತು. ಕ್ಷೇತ್ರದ ಅನುವಂಶೀಯ ಆಡಳಿತದಾರ ಎ. ಜೀವಂಧರಕುಮಾರ್, ಕ್ಷೇತ್ರದ ಗುತ್ತು ಬರ್ಕೆಯವರು ಭಾಗವಹಿಸಿದ್ದರು.
ಇಂದು ಕುರುಸಂಬಿಲ ನೇಮ
ಮಾ. 19ರಂದು ರಾತ್ರಿ ಧಾರ್ಮಿಕ ಮತ್ತು ಸಾಂಸ್ಕೃತಿಕ ಕಲಾಪಗಳು, ಹೂವಿನ ಪೂಜೆ, ಕೊಡಮಣಿತ್ತಾಯ ದೈವದ ಕುರುಸಂಬಿಲ ನೇಮ, ತುಲಾಭಾರ ಸೇವೆ ನಡೆಯಲಿದೆ.
ನಾದ- ಸಂಗಮ ಸಂಜೆ 7.30 ರಿಂದ ಗಾಯಕ ಅಜಯ್ ವಾರಿಯರ್ ಮತ್ತು ಕನ್ನಡ ಟಿ.ವಿ. ವಾಹಿನಿಗಳ ಕಲಾವಿದರಿಂದ ನಾದ- ಸಂಗಮ ಕಾರ್ಯಕ್ರಮ ನಡೆಯಲಿದೆ.