ಪೊಳಲಿ: ಪುರಾಣ ಪ್ರಸಿದ್ಧ ಪೊಳಲಿ ರಾಜರಾಜೇಶ್ವರೀ ದೇವಸ್ಥಾನದಲ್ಲಿ ಮಾ. 4ರಿಂದ ಮಾ. 13ರ ವರೆಗೆ ಪುನಃ ಪ್ರತಿಷ್ಠೆ, ಅಷ್ಟಬಂಧ, ನೂತನ ದ್ವಜಸ್ತಂಭ ಪ್ರತಿಷ್ಠಾ ಬ್ರಹ್ಮಕಲಶಾಭಿಷೇಕ ಹಾಗೂ ಬ್ರಹ್ಮಕಲಶೋತ್ಸವ ಜರಗಲಿದ್ದು, ಇದರ ಪೂರ್ವಭಾವಿಯಾಗಿ ಚಪ್ಪರ ಮುಹೂರ್ತವು ಗುರುವಾರ ಬೆಳಗ್ಗೆ ಬ್ರಹ್ಮಶ್ರೀ ವೇ| ಮೂ|
ಪೊಳಲಿ ಸುಬ್ರಹಣ್ಯ ತಂತ್ರಿಗಳ ನೇತೃತ್ವದಲ್ಲಿ ಜರಗಿತು. ದೇವಸ್ಥಾನದಲ್ಲಿ ಪ್ರಾರ್ಥನೆ ಸಲ್ಲಿಸಿದ ಬಳಿಕ ಧಾರ್ಮಿಕ ವಿಧಿವಿಧಾನಗಳನ್ನು ಕೈಗೊಂಡು ಶುಭಮುಹೂರ್ತದಲ್ಲಿ ಈ ಕಾರ್ಯವನ್ನು ನೆರವೇರಿಸಲಾಯಿತು.
ಪ್ರಧಾನ ಅರ್ಚಕರಾದ ಮಾಧವ ಭಟ್, ನಾರಾಯಣ ಭಟ್, ಕೆ.ರಾಮ್ ಭಟ್, ಆದರ್ಶ ಭಟ್, ವಿಷ್ಣುಮೂರ್ತಿ ನಟ್ಟೋಜ, ಮಾಧವ ಮಯ್ಯ, ದೇವಸ್ಥಾನದ ಆಡಳಿತ ಮೊಕ್ತೇಸರ
ಡಾ| ಮಂಜಯ್ಯ ಶೆಟ್ಟಿ ಅಮ್ಮುಂಜೆಗುತ್ತು, ಆನುವಂಶಿಕ ಮೊಕ್ತೇಸರ ಉಳಿಪಾಡಿಗುತ್ತು ತಾರಾನಾಥ ಆಳ್ವ, ಆನುವಂಶಿಕ ಮೊಕ್ತೇಸರ ಚೇರ ಸೂರ್ಯನಾರಾಯಣ ರಾವ್,
ಪದ್ಮನಾಭ ಭಟ್, ಅನಂತ ಪದ್ಮನಾಭ ಭಟ್, ಕಾರ್ಯನಿರ್ವಹಣಾಧಿಕಾರಿ ಪ್ರವೀಣ್, ಬ್ರಹ್ಮಕಲಶೋತ್ಸವ ಸಮಿತಿ ಗೌರವಾಧ್ಯಕ್ಷ ಬಿ.ರಮಾನಾಥ ರೈ, ಬಿ. ನಾಗರಾಜ ಶೆಟ್ಟಿ, ಜಿ.ಪಂ. ಸದಸ್ಯ ಚಂದ್ರಪ್ರಕಾಶ್ ಶೆಟ್ಟಿ ತುಂಬೆ, ತಾ. ಪಂ. ಸದಸ್ಯ ಯಶವಂತ ಪೊಳಲಿ, ಶೆಡ್ಡೆ ಮಂಜುನಾಥ ಭಂಡಾರಿ, ಆಶಾಜ್ಯೋತಿ ರೈ, ಕೃಷ್ಣಕುಮಾರ್ ಪೂಂಜ ಅಮ್ಮುಂಜೆಗುತ್ತು,
ಶಿವಪ್ರಸಾದ್ ಅಮ್ಮುಂಜೆಗುತ್ತು, ಜೀವರಾಜ್ ಶೆಟ್ಟಿ ಅಮ್ಮುಂಜೆಗುತ್ತು, ದೇವ್ ದಾಸ್ ಹೆಗ್ಡೆ ಅಮ್ಮುಂಜೆಗುತ್ತು, ಗಣೇಶ್ ಶೆಟ್ಟಿ ಪರಾರಿ, ವೆಂಕಟೇಶ್ ನಾವಡ, ಸೇಸಪ್ಪ ಕೋಟ್ಯಾನ್ ಪಚಿನಡ್ಕ, ರಾಮ್ ದಾಸ್ ಕೋಟ್ಯಾನ್, ಸುಬ್ರಾಯ ಕಾರಂತ, ಚಂದ್ರಶೇಖರ ಭಂಡಾರಿ, ಚಂದ್ರಹಾಸ ಶೆಟ್ಟಿ, ಧನಂಜಯ ಗಂದಾಡಿ, ರಾಮಚಂದ್ರಭಟ್, ಶಿವಪ್ರಸಾದ್ ಮತ್ತು ಭಕ್ತರು ಉಪಸ್ಥಿತರಿದ್ದರು.