ಪುತ್ತೂರು ಫೆ. 19: ಪಡುಮಲೆ ಶ್ರೀ ಪೂಮಾಣಿ -ಕಿನ್ನಿಮಾಣಿ ದೈವಸ್ಥಾನ ಮತ್ತು ವ್ಯಾಘ್ರ ಚಾಮುಂಡಿ ದೈವಸ್ಥಾನದ ಪುನಃ ಪ್ರತಿಷ್ಠಾ ಬ್ರಹ್ಮಕಲಶವು ಫೆ. 23ರಿಂದ 25ರ ವರೆಗೆ ಹಾಗೂ ದೈವಗಳ ನೇಮ ಮಾ. 8ರಿಂದ 12ರ ತನಕ ನಡೆಯಲಿದ್ದು, ಸೋಮವಾರ ಪುತ್ತೂರು ನಗರದಲ್ಲಿ ಆಮಂತ್ರಣ ಪತ್ರಿಕೆ ವಿತರಿಸಲಾಯಿತು.
ದರ್ಬೆ ಬೈಪಾಸ್ ಬಳಿ ನಗರಸಭಾ ಅಧ್ಯಕ್ಷೆ ಜಯಂತಿ ಬಲಾ°ಡು ಅವರು ತೆಂಗಿನಕಾಯಿ ಒಡೆಯುವ ಮೂಲಕ ಆಮಂತ್ರಣ ವಿತರಣೆಗೆ ಚಾಲನೆ ನೀಡಿದರು. ಬಳಿಕ ದರ್ಬೆಯಿಂದ ಬ್ಯಾಂಡ್ ವಾದ್ಯದೊಂದಿಗೆ ನಗರದ ಅಂಗಡಿ ಮುಂಗಟ್ಟುಗಳು, ಸಾರ್ವಜನಿಕರಿಗೆ ಆಮಂತ್ರಣ ಪತ್ರ ವಿತರಿಸಿ ಕಾರ್ಯಕ್ರಮಕ್ಕೆ ಆಹ್ವಾನಿಸಲಾಯಿತು.
ಬ್ರಹ್ಮಕಲಶ ಸಮಿತಿಯ ಅಧ್ಯಕ್ಷ ಹೇಮನಾಥ ಶೆಟ್ಟಿ ಕಾವು, ದೈವಸ್ಥಾನದ ವ್ಯವಸ್ಥಾಪನ ಸಮಿತಿ ಅಧ್ಯಕ್ಷ ರವಿರಾಜ ಶೆಟ್ಟಿ, ಪಡುಮಲೆ ಶ್ರೀ ಕೂವೆ ಶಾಸ್ತಾರ ವಿಷ್ಣುಮೂರ್ತಿ ದೇವಸ್ಥಾನದ ವ್ಯವಸ್ಥಾಪನ ಸಮಿತಿ ಅಧ್ಯಕ್ಷ ಕೆ. ಪಿ. ಸಂಜೀವ ರೈ, ಕ್ರಿಯಾ ಸಮಿತಿ ಅಧ್ಯಕ್ಷ ಗಣೇಶ್ ಭಟ್ ಬೀರ್ನೋಡಿ, ಬಡಗನ್ನೂರು ಗ್ರಾ.ಪಂ. ಅಧ್ಯಕ್ಷ ಕೇಶವ ಗೌಡ ಕನ್ನಯ, ಜಿ.ಪಂ. ಸದಸ್ಯೆ ಅನಿತಾ ಹೇಮನಾಥ ಶೆಟ್ಟಿ, ಬ್ರಹ್ಮಕಲಶ ಸಮಿತಿ ಉಪಾಧ್ಯಕ್ಷ ಜನಾರ್ದನ ಪೂಜಾರಿ ಪದಡ್ಕ, ಕಾರ್ಯಾಧ್ಯಕ್ಷ ಶೈಲೇಶ್ ಸುವರ್ಣ, ಉಪಾಧ್ಯಕ್ಷ ಶ್ರೀನಿವಾಸ ಗೌಡ ಕನ್ನಯ, ಕೆಮ್ಮಿಂಜೆ ದೇವಾಲಯದ ವ್ಯವಸ್ಥಾಪನ ಸಮಿತಿ ಅಧ್ಯಕ್ಷ ಕೇಶವ ಪೂಜಾರಿ, ಕಾವು ದೇವಾಲಯದ ವ್ಯವಸ್ಥಾಪನ ಸಮಿತಿ ಅಧ್ಯಕ್ಷ ದಿವ್ಯನಾಥ ಶೆಟ್ಟಿ, ಉದ್ಯಮಿ ಕೃಷ್ಣ ಶೆಟ್ಟಿ, ಗ್ರಾ.ಪಂ. ಸದಸ್ಯರಾದ ಗೋಪಾಲ ಕೃಷ್ಣ ಸುಳ್ಯಪದವು, ಹೇಮಲತಾ ಸಂಪಿಗೆಮಜಲು, ಗುರುಪ್ರಸಾದ್ ರೈ, ವಿಜಯಲಕ್ಷ್ಮೀ, ಜಲಜಾಕ್ಷಿ, ದಮಯಂತಿ, ಪ್ರಮುಖರಾದ ಪುರಂದರ ರೈ ಕುದಾRಡಿ, ಜಯಂತ ರೈ ಕುದಾRಡಿ, ಜಯರಾಜ ಶೆಟ್ಟಿ ಅಣಿಲೆ, ಕೆ.ಸಿ. ಪಾಟಾಳಿ, ವಿಜಯಕುಮಾರ್ ಸೋಣಂಗೇರಿ, ಸೇವಾ ಪ್ರತಿನಿಧಿ ವಿಜಯಲಕ್ಷ್ಮೀ ಪಟ್ಟೆ ಹಾಗೂ ಭಕ್ತರು ಉಪಸ್ಥಿತರಿದ್ದರು.