ಪುತ್ತೂರು : ಮಹತೋಭಾರ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಸ್ವರ್ಣ ಕವಚದ ನೂತನ ಧ್ವಜಸ್ತಂಭ ಪ್ರತಿಷ್ಠಾ ಬ್ರಹ್ಮಕಲಶೋತ್ಸವದ ಹಿನ್ನೆಲೆಯಲ್ಲಿ ಸೋಮವಾರ ವಿವಿಧ ವೈದಿಕ ಕಾರ್ಯಕ್ರಮಗಳು ಬ್ರಹ್ಮಶ್ರೀ ಕುಂಟಾರು ರವೀಶ ತಂತ್ರಿಯವರ ನೇತೃತ್ವದಲ್ಲಿ ನಡೆದವು.
ಬೆಳಗ್ಗೆ ಗಣಪತಿ ಹೋಮ, ಪ್ರೋಕ್ತಹೋಮ, ಪ್ರಾಯಶ್ಚಿತ್ತ ಹೋಮ, ಬಿಂಬ ಶುದ್ಧಿ, ಮಧ್ಯಾಹ್ನ ಅಂಕುರ ಪೂಜೆ, ಮಹಾಪೂಜೆ, ಸಂಜೆ ಹೋಮ ಕಲಶಾಭಿಷೇಕ, ಅಂಕುರ ಪೂಜೆ, ಮಹಾಪೂಜೆ ನಡೆಯಿತು. ವ್ಯವಸ್ಥಾಪನ ಸಮಿತಿ ಅಧ್ಯಕ್ಷರು ಹಾಗೂ ಸದಸ್ಯರು, ನೂರಾರು ಮಂದಿ ಭಕ್ತರು ಪಾಲ್ಗೊಂಡರು.
ಇಂದಿನ ಕಾರ್ಯಕ್ರಮ ಮಾ. 19ರ ಬೆಳಗ್ಗೆ ಗಣಪತಿ ಹೋಮ, ಶಾಂತಿ ಹೋಮಗಳು, ದಹನ ಪ್ರಾಯಶ್ಚಿತ, ತ್ರಿಕಾಲ ಪೂಜೆ, ಮಧ್ಯಾಹ್ನ ಅಂಕುರ ಪೂಜೆ, ಮಹಾಪೂಜೆ, ಸಂಜೆ ಹೋಮ ಕಲಶಾಭಿಷೇಕ, ಅನುಜ್ಞಾ ಕಲಶ ಪೂಜೆ, ಮಹಾಪೂಜೆ ನಡೆಯಲಿದೆ.